Shivamogga ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ.

Shivamogga ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ನ್ಯಾಯಾಧೀಶರ ಅಧಿಕೃತ ಇ-ಮೇಲ್ ವಿಳಾಸಕ್ಕೆ ಅಪರಿಚಿತ ವ್ಯಕ್ತಿಯಿಂದ ಈ ಸಂದೇಶ ರವಾನೆಯಾಗಿದೆ ಎನ್ನಲಾಗಿದೆ.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು
ವಿಷಯ ತಿಳಿಯುತ್ತಿದ್ದಂತೆ ಶಿವಮೊಗ್ಗ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದರು. ಜೊತೆಗೆ ಬಾಂಬ್ ನಿಷ್ಕ್ರಿಯ ದಳ (BDDS) ಹಾಗೂ ಶ್ವಾನದಳವನ್ನು ನಿಯೋಜಿಸಿ ನ್ಯಾಯಾಲಯದ ಸಂಕೀರ್ಣದಲ್ಲಿ ತೀವ್ರ ತಪಾಸಣೆ ನಡೆಸಲಾಯಿತು.
MUST READ : ಗೋಲ್ಡ್ ಪ್ರಿಯರಿಗೆ ಗುಡ್ನ್ಯೂಸ್ – ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಮುಂಜಾಗ್ರತಾ ಕ್ರಮವಾಗಿ ನ್ಯಾಯಾಲಯದ ಆವರಣದಲ್ಲಿದ್ದ ಸಿಬ್ಬಂದಿ, ವಕೀಲರು ಹಾಗೂ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಬಳಿಕ ಕೋರ್ಟ್ ಕಟ್ಟಡ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಕೂಲಂಕಷವಾಗಿ ಪರಿಶೀಲಿಸಲಾಯಿತು.
ತನಿಖೆ ಮುಂದುವರಿಕೆ
ಬೆದರಿಕೆ ಇ-ಮೇಲ್ ಕಳುಹಿಸಿದ ವ್ಯಕ್ತಿಯ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದು, ಸಂದೇಶದ ಮೂಲವನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ. ಈ ಘಟನೆ ನ್ಯಾಯಾಲಯದ ಭದ್ರತೆ ಕುರಿತು ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ.
MUST WATCH : ಹೆಣ ಹೊರೋಕೆ 20 ಜನರು ಬೇಕು – ಮಳೆ ಬಂದ್ರೆ ರಸ್ತೆ ಅಲ್ಲ… ಕೆಸರು ಗದ್ದೆ | NEWS |




