ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ ಪ್ರಕರಣ – ಚೆನ್ನೈ ಮೂಲದ ಗುತ್ತಿಗೆದಾರ ಕಂಪನಿ ವಿರುದ್ಧ FIR.!

ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಜನ ಅಮಾಯಕರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಗುತ್ತಿಗೆದಾರ ಕಂಪನಿ ವಿರುದ್ಧ FIR ದಾಖಲಾಗಿದೆ. ಆರೋಗ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ನೀಡಿದ ದೂರಿನ ಮೆರೆಗೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಧಿಕಾರಿಗಳ ನಿರ್ಲಕ್ಷ್ಯವೇ ದುರಂತ ಕಾರಣ
ಚೆನ್ನೈ ಮೂಲದ ಎ.ಎಸ್.ಆರ್ ಟ್ರೇಡರ್ಸ್ ಕಂಪನಿಗೆ ಬೌರಿಂಗ್ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣಕ್ಕಾಗಿ ಹಳೆಯ ಕಟ್ಟಡ ತೆರವುಗೊಳಿಸುವ ಗುತ್ತಿಗೆ ನೀಡಲಾಗಿತ್ತು. ಆದ್ರೆ, ಕಟ್ಟಡ ನೆಲಸಮ ಮಾಡಿದ ಬಳಿಕ ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡದೇ ಅಲ್ಲೇ ಬಿಟ್ಟು ಹೋಗಿದ್ದೇ ಈ ದುರಂತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.
READ THIS : ರಾಜ್ಯಾದ್ಯಂತ ಮುಂದಿನ 7 ದಿನ ಭಾರೀ ಮಳೆ ಮುನ್ಸೂಚನೆ!

ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚನೆ
ಇನ್ನು ಕಾಂಪೌಂಡ್ ಕುಸಿತ ಘಟನೆ ಬಳಿಕ ಪ್ರಕರಣದ ತನಿಖೆಗೆ ತಾಂತ್ರಿಕ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿ ಪರಿಶೀಲನೆ ವೇಳೆ ಗುತ್ತಿಗೆ ಕಂಪನಿಯ ನಿರ್ಲಕ್ಷ್ಯ ಬೆಳಕಿಗೆ ಬಂದಿದ್ದು, ಕಂಪನಿಗೆ ಸ್ಪಷ್ಟೀಕರಣ ನೀಡುವಂತೆ ನೋಟಿಸ್ ಜಾರಿಗೊಳಿಸಲಾಗಿತ್ತು. ಆದರೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆ, ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೂಚನೆ ನೀಡಿದ್ದರು ಎನ್ನಲಾಗಿದೆ.

ಗುತ್ತಿಗೆದಾರ ಕಂಪನಿ ವಿರುದ್ಧ FIR
ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಎ.ಎಸ್.ಆರ್ ಟ್ರೇಡರ್ಸ್ ಕಂಪನಿಗೆ ನೋಟಿಸ್ ನೀಡಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
MUST WATCH : ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾ* – ಮೃತನ ಪತ್ತೆಗೆ ಮುಂದಾದ ಪೊಲೀಸರು




