
GUBBI : ದನಗಳಿಗೆ ನೀರು ಕುಡಿಸಲು ಹೋದಾಗ ದುರಂತ – ಕೆರೆಗೆ ಬಿದ್ದು ಬಾಲಕ ಸಾವು!
ದನಗಳಿಗೆ ನೀರು ಕುಡಿಸಲು ಹೋಗಿದ್ದ ಬಾಲಕನೊಬ್ಬ ಆಯಾತಪ್ಪಿ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲೂಕಿನ ಬಿದರೆ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಬಿದರೆ ಗ್ರಾಮದ ಮಂಜೇಂದ್ರ ಎಂಬುವರ ಮಗ 14 ವರ್ಷದ ಯಶವಂತ ಎಂದು ಗುರುತಿಸಲಾಗಿದೆ.
READ THIS : ಕೆರೆಗೆ ಈಜಲು ಹೋದ ಮೂವರು ಬಾಲಕರು ನೀರುಪಾಲು..!!
ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ಬಾಲಕ
9 ನೇ ತರಗತಿ ಓದುತ್ತಿದ್ದ ಬಾಲಕ, ಶಾಲೆಗೆ ರಜೆ ಇದ್ದಿದ್ದರಿಂದ ದನ ಮೇಯಿಸಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆ ಚೇಳೂರು ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

GUBBI – ತನಿಖೆ ಆರಂಭ
ಬಳಿಕ ಅಗ್ನಿಶಾಮಕ ದಳದ ನೆರವಿನಿಂದ ವಿದ್ಯಾರ್ಥಿಯ ಮೃತದೇಹವನ್ನು ಹೊರತೆಗೆದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
MUST WATCH : ನೆಲಮಂಗಲದಲ್ಲಿ JDS ರೈತ ಯಾತ್ರೆ – ನಿಖಿಲ್ ನೇತೃತ್ವದಲ್ಲಿ ಶಕ್ತಿ ಪ್ರದರ್ಶನ.!





