Bengaluru : ಶ್ಯಾಮಣ್ಣ ಗಾರ್ಡನ್ನಲ್ಲಿ ಮಾಜಿ ಪ್ರೇಯಸಿ ಕರೆ ಮೇರೆಗೆ ಆಕೆಯ ಮನೆಗೆ ಹೋಗಿದ್ದ ಯುವಕ ಹತ್ಯೆಗೀಡಾಗಿರುವಂತಹ ಘಟನೆ ನಡೆದಿದೆ.

ಮಾಜಿ ಪ್ರೇಯಸಿಯ ಕರೆದಳು ಎಂದು ಆಕೆಯನ್ನು ಭೇಟಿ ಮಾಡಲು ಮನೆಗೆ ಹೋಗಿದ್ದ ಯುವಕನೋರ್ವ ತೀವ್ರ ಹಲ್ಲೆಗೊಳಗಾಗಿ ಸಾವನ್ನಪ್ಪಿರುವಂತಹ ದಾರುಣ ಘಟನೆ ನಗರದ Bengaluru ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊಲೆ ಪ್ರಕರಣ ದಾಖಲು
ಮೃತ ಯುವಕನನ್ನು ರಾಮನಗರ ಜಿಲ್ಲೆಯ ಬಿಡಿ ಕಾಲೋನಿ ನಿವಾಸಿ ಮೊಹಮ್ಮದ್ ಖಾಸಿಂ (27) ಎಂದು ಗುರುತಿಸಲಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರೇಯಸಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಇದನ್ನು ಓದಿ : ಹಿಟ್ & ರನ್ ದುರಂತ – ಬೈಕ್ ಸವಾರ ಸ್ಥಳದಲ್ಲೇ ಸಾವು..!!
ಅಷ್ಟಕ್ಕೂ ಆಗಿದ್ದೇನು?
ಖಾಸಿಂ ಮತ್ತು ಯುವತಿ ನಾಲ್ಕು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸುತ್ತಿದ್ದರು. ಬಳಿಕ ಯುವತಿಗೆ ಬೆಂಗಳೂರಿನ ಮತ್ತೊಬ್ಬ ಯುವಕನೊಂದಿಗೆ ಮದುವೆಯಾಗಿತ್ತು. ಆದರೂ ಇಬ್ಬರ ನಡುವೆ ಸಂಪರ್ಕ ಇತ್ತು ಎನ್ನಲಾಗಿದೆ. ಮೇ 25ರ ಸಂಜೆ ಮಾಜಿ ಪ್ರೇಯಸಿಯು ಕರೆದಳೆಂದು ಪ್ರಿಯಕರ ಮೊಹಮ್ಮದ್ ಖಾಸಿಂ, ಶ್ಯಾಮಣ್ಣ ಗಾರ್ಡನ್ನಲ್ಲಿರುವ ಆಕೆಯ ಮನೆಗೆ ಹೋಗಿದ್ದಾನೆ. ಈ ವೇಳೆ ಪ್ರೇಯಸಿಯ ಮನೆಯಲ್ಲಿ ಖಾಸಿಂ ಆಕೆಯ ಪತಿ ಕೈಯಲ್ಲಿ ಸಿಕ್ಕಿಬಿದ್ದಿದ್ದ.
Bengaluru – ಚಿಕಿತ್ಸೆ ಫಲಕಾರಿಯಾಗದೆ ಖಾಸಿಂ ಸಾವು
ಇದರಿಂದ ಆಕ್ರೋಶಗೊಂಡ ಪತಿ ಹಾಗೂ ಕುಟುಂಬಸ್ಥರು ಖಾಸಿಂ ಮೇಲೆ ತೀವ್ರ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಇದ್ರಿಂದ ಗಂಭೀರವಾಗಿ ಗಾಯಗೊಂಡಿದ್ದ ಖಾಸಿಂ ಬಳಿಕ ರಾಮನಗರದಲ್ಲಿರುವ ತನ್ನ ಮನೆಗೆ ತೆರಳಿ ವಿಶ್ರಾಂತಿ ಪಡೆದಿದ್ದ. ಆದರೆ ಗಾಯದ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂರು ದಿನಗಳ ಕಾಲ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಖಾಸಿಂ ಕೊನೆಯುಸಿರೆಳೆದಿದ್ದಾನೆ. ಘಟನೆ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನು ನೋಡಿ : TOURIST PLACEನಲ್ಲಿ ಪುಂಡರಿಂದ ಇದೆಂಥಾ ವರ್ತನೆ- ಅರಣ್ಯ ಇಲಾಖೆ ಅಧಿಕಾರಿಗಳು ಏನ್ ಮಾಡ್ತಿದ್ದಾರೆ?




