
BREAKING : ವಿಜಯಪುರದಲ್ಲಿ ಕ್ರೇನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!
ಕ್ರೇನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೋರ್ವನ ಶವ ಪತ್ತೆಯಾಗಿರುವ ಘಟನೆ ವಿಜಯಪುರ ನಗರದ ದರ್ಗಾ ರಿಂಗ್ ರೋಡ್ ಬಳಿ ನಡೆದಿದೆ.
ಅನುಮಾನಾಸ್ಪದ ರೀತಿಯಲ್ಲಿ ಶವ ಪತ್ತೆ!
ಮೃತ ಯುವಕನನ್ನು ಆಕಾಶ್ ಪಾಟೀಲ್ ಎಂದು ಗುರುತಿಸಲಾಗಿದೆ. ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗ್ತಿವೆ.
READ THIS : ‘ಬೆಕ್ಕು ಸಾಕೋದು ಬೇಡ’ ಎಂದಿದ್ದಕ್ಕೆ ವೈದ್ಯೆ Suicide!

ಸಾವಿನ ಸುತ್ತ ಅನುಮಾನದ ಹುತ್ತ!
ಘಟನಾ ಸ್ಥಳಕ್ಕೆ ಆದರ್ಶ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನಾ ಅಥವಾ ಸಾವಿನ ಹಿಂದೆ ಬೇರೆ ಯಾರದ್ದಾದರೂ ಕೈವಾಡ ಇದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಿಸಿ ಕ್ಯಾಮೆರಾಗಳ ಪರಿಶೀಲನೆ
ಘಟನೆಯ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕುತ್ತಿರುವ ಪೊಲೀಸರು, ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಇನ್ನು ಈ ಘಟನೆ ಆದರ್ಶ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಯುವಕನ ಸಾವಿನ ನಿಖರ ಕಾರಣ ತನಿಖೆಯಿಂದ ತಿಳಿದುಬರಬೇಕಿದೆ.

MUST WATCH : ನಿಷೇಧದ ನಡುವೆಯೂ DJ ಬಳಸಿ DANCE – SOUND SYSTEM SEIZE ಮಾಡಿ CASE ದಾಖಲು




