ಗಂಡು ಮಗು ಹುಟ್ಟಿದ್ದಕ್ಕೆ ಪಾರ್ಟಿ ಕೇಳಿದ್ದ ಸ್ನೇಹಿತನ ಬರ್ಬರ Murder.!

ಬೆಳಗಾವಿ ಜಿಲ್ಲೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ನಡೆದ ಜಗಳ, ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ. ಗಂಡು ಮಗು ಹುಟ್ಟಿದ್ದಕ್ಕೆ ಪಾರ್ಟಿ ಕೇಳಿದ ವಿಚಾರವೇ ಇಬ್ಬರು ಸ್ನೇಹಿತರ ನಡುವೆ ವೈಮನಸ್ಸಿಗೆ ಕಾರಣವಾಗಿ, ಕೊನೆಗೆ ಒಬ್ಬನ ಪ್ರಾಣ ಬಲಿಯಾಗಿದೆ.

ಗಂಡು ಮಗು ಹುಟ್ಟಿದ್ದಕ್ಕೆ ಪಾರ್ಟಿ ಕೇಳಿದ್ದೇ ತಪ್ಪಾಯ್ತ
ಬೈಲಹೊಂಗಲ ತಾಲೂಕಿನ ವಣ್ಣೂರು ಗ್ರಾಮದ ನಿವಾಸಿ ಹಣಮಂತಪ್ಪ ಇಟಗಿ ಕೊಲೆಯಾದ ದುರ್ದೈವಿ. ಆರೋಪಿ ವಿಶ್ವನಾಥ್ ಪೂಜಾರಿಗೆ ಇತ್ತೀಚೆಗೆ ಗಂಡು ಮಗು ಜನಿಸಿತ್ತು. ಇದೇ ಸಂತಸದ ಹಿನ್ನೆಲೆಯಲ್ಲಿ ಹಣಮಂತಪ್ಪ ಸ್ನೇಹಿತನ ಬಳಿ ಪಾರ್ಟಿ ಕೇಳಿದ್ದಾನೆ.
ಇದನ್ನು ಓದಿ : ಬೆಂಗಳೂರಲ್ಲಿ ಒಂದೇ ಕುಟುಂಬದ ಮೂವರ ಬರ್ಬರ Murder – ಆಗಿದ್ದೇನು?

ಪಾರ್ಟಿ ಕೇಳಿದ ಸ್ನೇಹಿತನ ಬರ್ಬರ Murder !
ಪಾರ್ಟಿ ವಿಚಾರವಾಗಿ ಇಬ್ಬರ ನಡುವೆ ಸಣ್ಣದಾಗಿ ಶುರುವಾದ ವಾಗ್ವಾದ ವಿಕೋಪಕ್ಕೆ ತಿರುಗಿದೆ. ಗಲಾಟೆ ತೀವ್ರಗೊಳ್ಳುತ್ತಿದ್ದಂತೆ ಆಕ್ರೋಶಗೊಂಡ ವಿಶ್ವನಾಥ್ ಪೂಜಾರಿ, ತನ್ನದೇ ಗೆಳೆಯ ಹಣಮಂತಪ್ಪನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ.
ಆರೋಪಿ ಅಂದರ್
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನು ನೋಡಿ : SELFIE.. REELS ಗೀಳಿಗೆ ಬಿದ್ದ ಉಪನ್ಯಾಸಕ – DEVARAYANADURGAದ ಬೆಟ್ಟದಿಂದ ಬಿದ್ದೇ ಬಿಟ್ರು




