
ಬೆಂಗಳೂರಲ್ಲಿ ಸುಟ್ಟ ಸ್ಥಿತಿಯಲ್ಲಿ KSRP ಕಾನ್ಸ್ಟೇಬಲ್ ಶವ ಪತ್ತೆ : ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ!
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ KSRP ಕಾನ್ಸ್ಟೇಬಲ್ ಒಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಹೌದು.. ಚಿಂತಾಮಣಿ ಹೆದ್ದಾರಿ ಸಮೀಪದ ಡಿ. ಶೆಟ್ಟಹಳ್ಳಿ ಗೇಟ್ ಬಳಿ ಅವರ ಮೃತದೇಹ ಪತ್ತೆಯಾಗಿದ್ದು, ಮೃತರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಮೂಲದ 35 ವರ್ಷದ ನವೀನ್ ಕುಮಾರ್ ಎಂದು ಗುರುತಿಸಲಾಗಿದೆ.
READ THIS : ಕ್ರೇನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!
ಸಾವಿಗೆ ನಿಖರ ಕಅರಣವೇನು?
ನವೀನ್ ಕುಮಾರ್ ಬೈಕ್ನಲ್ಲಿ ಡಿ. ಶೆಟ್ಟಹಳ್ಳಿ ಭಾಗಕ್ಕೆ ಹೋಗಿದ್ದರು ಎನ್ನಲಾಗಿದೆ. ಮೃತದೇಹವನ್ನು ಕಂಡ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ನವೀನ್ ಅವರ ಸಾವಿಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಅಧಿಕೃತ ತನಿಖೆಯಿಂದಷ್ಟೇ ಸತ್ಯಾಂಶ ಹೊರಬರಬೇಕಿದೆ.

ಪೊಲೀಸರು ಭೇಟಿ, ಪರಿಶೀಲನೆ
ಇನ್ನು ವಿಷಯ ತಿಳಿಯುತ್ತಿದ್ದಂತೆ ನಂದಗುಡಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಟ್ಟಾರೆ 35 ವರ್ಷದ ಕೆಎಸ್ಆರ್ಪಿ ಸಿಬ್ಬಂದಿ ನವೀನ್ ಕುಮಾರ್ ಅವರು ಶವವಾಗಿ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.
MUST WATCH : ದಿ.ಶಾಮನೂರು ಶಿವಶಂಕರಪ್ಪ ನಿವಾಸಕ್ಕೆ ಪರಂ – ಬರಪೀಡಿತ ತಾಲ್ಲೂಕು ಘೋಷಿಸುವಂತೆ ಮನವಿ




