ಪೊಲೀಸ್ ನೇಮಕಾತಿ ಪರೀಕ್ಷೆ ಗೊಂದಲ: ಯುವಕರ ಭವಿಷ್ಯ ಹಾಳು ಮಾಡಿದ ಸರ್ಕಾರಕ್ಕೆ ಉತ್ತರದಾಯಿತ್ವ ಯಾರು? ಗೃಹ ಸಚಿವರಿಂದ ತಕ್ಷಣವೇ ರಾಜೀನಾಮೆ ಪಡೆಯಿರಿ..!

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಉಂಟಾದ ಗೊಂದಲದ ಪರಿಣಾಮ ಬಿಜೆಪಿ ಪರಿಷತ್ ಸದಸ್ಯ ಸಿ.ಟಿ ರವಿ, ( C.T Ravi) ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
OMR ಶೀಟ್ ಗೊಂದಲ
ಸೋಶಿಯಲ್ ಮಿಡಿಯಾ ಎಕ್ಸ್ (X)ನಲ್ಲಿ ಪೋಸ್ಟ್ ಮಾಡಿರುವ ಸಿ.ಟಿ. ರವಿ, OMR ಶೀಟ್ ಗೊಂದಲ ಹಾಗೂ ಅಸಮರ್ಥ ವ್ಯವಸ್ಥೆಯಿಂದ ಸಾವಿರಾರು ಅಭ್ಯರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಆರೋಪಿಸಿದ್ದಾರೆ.

ಅಭ್ಯರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಮತ್ತೊಂದು ಸಾಕ್ಷಿ ಎಂದು ಟೀಕಿಸಿರುವ ಅವರು, “ಗೃಹ ಸಚಿವರು ಇತರರಿಗೆ ಸರ್ಟಿಫಿಕೇಟ್ ನೀಡುವ ಕೆಲಸದಲ್ಲಿ ತೊಡಗಿದ್ದು, ತಮ್ಮ ಇಲಾಖೆಯ ಜವಾಬ್ದಾರಿಯನ್ನು ಕಡೆಗಣಿಸಿದ್ದಾರೆ. ಇದರ ಪರಿಣಾಮ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಆರೋಪಿಸಿದ್ದಾರೆ.
ಇದನ್ನು ಓದಿ : MLC ಸಿಟಿ ರವಿಗೆ ತಾತ್ಕಾಲಿಕ ರಿಲೀಫ್, ಬಂಧನದಿಂದ ಬಚಾವ್
ಮರು ಪರೀಕ್ಷೆ ನಡೆಸಬೇಕು
ಗೊಂದಲ ಉಂಟಾದ ಪರೀಕ್ಷಾ ಕೇಂದ್ರಗಳ ಅಭ್ಯರ್ಥಿಗಳಿಗೆ ಯಾವುದೇ ವಿಳಂಬ ಮಾಡದೆ ಮರು ಪರೀಕ್ಷೆ ನಡೆಸಬೇಕು. ಜೊತೆಗೆ, ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಿಯಾಂಕ್ ರಾಜೀನಾಮೆಗೆ C.T Ravi ಆಗ್ರಹ
ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ನೀಡಿದ್ದ ಮುಖ್ಯಮಂತ್ರಿ ಅವರು, ರಾಜ್ಯದ ಯುವಕರ ಸಮಸ್ಯೆಗೂ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿರುವ ಸಿ.ಟಿ. ರವಿ, ಪರೀಕ್ಷಾ ಗೊಂದಲದ ನೈತಿಕ ಹೊಣೆ ಹೊತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.
ಇದನ್ನು ನೋಡಿ : ಕಾವೇರಿ ವಿವಾದ ಸಂಬಂಧ ಸರ್ವಪಕ್ಷ ಸಭೆ – ಸಭೆಯಲ್ಲಿ ಏನೆಲ್ಲಾ ಚರ್ಚೆ ಆಗಿದೆ ಸಾರ್





