ಸಚಿವ ಸಂಪುಟ ವಿಸ್ತರಣೆ ಕುರಿತು ಎಐಸಿಸಿ ಅಧ್ಯಕ್ಷ ಖರ್ಗೆ ಜೊತೆ CM ಡಿ.ಕೆ. ಶಿವಕುಮಾರ್ ಮಹತ್ವದ ಸಮಾಲೋಚನೆ

ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಸಚಿವರ ಆಯ್ಕೆ ಕುರಿತು ಸಮಾಲೋಚನೆ
ದೆಹಲಿ ಪ್ರವಾಸದ ವೇಳೆ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸುತ್ತಿದ್ದ ಖರ್ಗೆ ಅವರು ತುರ್ತಾಗಿ ಬೆಂಗಳೂರಿಗೆ ಮರಳಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಮತ್ತು ಡಿಸಿಎಂ ಅವರು ಖರ್ಗೆ ಅವರನ್ನು ಭೇಟಿ ಮಾಡಿ ಸಚಿವ ಸಂಪುಟ ಪುನರ್ರಚನೆ ಹಾಗೂ ಹೊಸ ಸಚಿವರ ಆಯ್ಕೆ ಕುರಿತು ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ : ಸಂಪುಟ ವಿಸ್ತರಣೆ ಸರ್ಕಸ್ – ಪ್ರತ್ಯೇಕ ಪಟ್ಟಿ ಕಳುಹಿಸಲು ಸಿಎಂ, ಮಾಜಿ ಸಿಎಂಗೆ ಸೂಚನೆ

11 ಜನರ ಪಟ್ಟಿಯಲ್ಲಿ ಯಾರನ್ನು ಕೈಬಿಡಬಹುದು?
ಹಿರಿಯ 11 ಮಾಜಿ ಸಚಿವರ ಹೆಸರಿಗೆ ಹೈಕಮಾಂಡ್ ವಿರೋಧ ಹಿನ್ನೆಲೆಯಲ್ಲಿ ಅದರ ಬಗ್ಗೆ ಎಐಸಿಸಿ ಅಧ್ಯಕ್ಷರ ಜೊತೆ ಸಿಎಂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. 11 ಜನರ ಪಟ್ಟಿಯಲ್ಲಿ ಯಾರನ್ನು ಕೈಬಿಡಬಹುದು? ಅಲ್ಲದೇ, ಉಳಿದ 32 ಹೆಸರುಗಳಲ್ಲಿ ಆಧ್ಯತೆ ಯಾರಿಗೆ ಕೊಡಬೇಕು ಎಂಬುದರ ಬಗ್ಗೆಯೂ ಚರ್ಚೆ ನಡೆದಿರುವ ಸಾಧ್ಯತೆಯಿದೆ.
ಸಚಿವ ಸ್ಥಾನಕ್ಕೆ ಲಾಬಿ
ಇದರ ಮಧ್ಯೆ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಅವರು ಕೂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನಕ್ಕೆ ತಮ್ಮನ್ನು ಪರಿಗಣಿಸುವಂತೆ ಮನವಿ ಮಾಡಿದ್ದಾರೆ.
ಇನ್ನೊಂದೆಡೆ ಶಾಸಕ ಎಂ. ಕೃಷ್ಣಪ್ಪ ಕೂಡ ಖರ್ಗೆ ಅವರನ್ನು ಭೇಟಿ ಮಾಡಿ ಸಚಿವ ಸಂಪುಟದಲ್ಲಿ ಅವಕಾಶ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ಇದನ್ನು ನೋಡಿ : ಚಾಮುಂಡೇಶ್ವರಿ ಭಕ್ತರಿಗೆ ಮೈಸೂರಿನಲ್ಲಿ ಸಕಲ ಸಿದ್ಧತೆ- ತಾಯಿ ದರ್ಶನ ಎಲ್ಲರಿಗೂ ಆಗುತ್ತೆ
ಸಿಎಂ ಹಾಗೂ ಮಾಜಿ ಸಿಎಂ ಇಬ್ಬರು ಸೇರಿ ಸಿದ್ಧಪಡಿಸಿದ ಪಟ್ಟಿಯಲ್ಲಿ 11 ಜನ ಹಿರಿಯ ಮಾಜಿ ಸಚಿವರ ಹೆಸರಿತ್ತು.
ಅದರಲ್ಲಿ ಶೇ.50 ರಷ್ಟು ಕಡಿತ ಮಾಡಲು ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ.




