ಇಂದು ಹೈಕಮಾಂಡ್ ಜೊತೆ CM ಡಿಕೆಶಿ ಸಭೆ : ಜು.30ಕ್ಕೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಾಧ್ಯತೆ!

ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಇದೀಗ ಅಂತಿಮ ಹಂತ ತಲುಪಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಕಾಂಗ್ರೆಸ್ನ ಹಿರಿಯ ನಾಯಕರು ಹಾಗೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳು ಪ್ರಸ್ತುತ ಹೈಕಮಾಂಡ್ ಭೇಟಿಗಾಗಿ ದೆಹಲಿಯಲ್ಲಿ ಬಿಡಾರ ಹೂಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಬರುವ ಗುರುವಾರ (ಜುಲೈ 30) ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆಯಿದೆ.
ಇಂದು ಹೈಕಮಾಂಡ್ ಜೊತೆ ಸಿಎಂ ಡಿಕೆಶಿ ಸಭೆ
ಸಂಪುಟ ಪುನಾರಚನೆ ಹಾಗೂ ವಿಸ್ತರಣೆಗೆ ಸಂಬಂಧಿಸಿದಂತೆ CM ಇಂದು ರಾತ್ರಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ನೂತನ ಸಚಿವರ ಅಂತಿಮ ಪಟ್ಟಿಗೆ ಹೈಕಮಾಂಡ್ ಅಂಕಿತ ಬೀಳುವ ನಿರೀಕ್ಷೆಯಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಇನ್ನು ಸಚಿವ ಸ್ಥಾನಕ್ಕಾಗಿ ಹಲವು ಶಾಸಕರು ದೆಹಲಿಯಲ್ಲೇ ಬೀಡುಬಿಟ್ಟು ತೀವ್ರ ಕಸರತ್ತು ನಡೆಸುತ್ತಿದ್ದಾರೆ.ದೆ.
ಇದನ್ನು ಓದಿ : ದೆಹಲಿಗೆ ಬರುವಂತೆ ಸಿದ್ದುಗೆ ಹೈಕಮಾಂಡ್ ಬುಲಾವ್ – ಕಾರಣವೇನು?

ಜು.30ಕ್ಕೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಾಧ್ಯತೆ!
ಎಲ್ಲವೂ ನಿರೀಕ್ಷೆಯಂತೆ ನಡೆದರೆ, ಜುಲೈ 30 (ಗುರುವಾರ) ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ಇದೆ. ಇದರಿಂದ ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ತೆರೆ ಬೀಳುವ ಸಾಧ್ಯತೆಯಿದೆ.
CM ಡಿಕೆಶಿ ಸಭೆ – ನೂತನ ಸಚಿವರು ಪದಗ್ರಹಣ ಮಾಡುವ ಹಾದಿ ಸುಗಮ
ನಿಗದಿತ ವೇಳಾಪಟ್ಟಿಯಂತೆ ಈಗಾಗಲೇ ಪ್ರಮಾಣವಚನ ಕಾರ್ಯಕ್ರಮ ನಡೆಯಬೇಕಾಗಿತ್ತು. ಆದರೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಇಂದೋರ್ ಪ್ರವಾಸದಲ್ಲಿದ್ದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿತ್ತು. ಈಗ ಹೈಕಮಾಂಡ್ನಿಂದ ಪಟ್ಟಿ ಅಂತಿಮಗೊಂಡು ರಾಜ್ಯಪಾಲರು ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಗುರುವಾರ ನೂತನ ಸಚಿವರು ಪದಗ್ರಹಣ ಮಾಡುವ ಹಾದಿ ಸುಗಮವಾಗಲಿದೆ.

ಇದನ್ನು ನೋಡಿ : SIDDARAMAIAH ಚುನಾವಣಾ ನಿವೃತ್ತಿ ಬಗ್ಗೆ ಮಗ YATHINDRA SIDDARAMAIAH ಶಾಕಿಂಗ್ ಹೇಳಿಕೆ




