ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆದಂತಿದೆ.

ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿರುವ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆದಂತಿದೆ. ಕಾಂಗ್ರೆಸ್ ಸರ್ಕಾರ ಜೂನ್ 27 ಅಥವಾ 29ರಂದು ಸಚಿವ ಸಂಪುಟ ವಿಸ್ತರಣೆ ನಡೆಸುವ ಸಾಧ್ಯತೆಗಳಿವೆ ಎನ್ನಲಾಗ್ತಿದೆ.
ಜೂನ್ 27 ಅಥವಾ 29ಕ್ಕೆ ಸಂಪುಟ ವಿಸ್ತರಣೆ?
ಜೂನ್ 18ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಹಾಗೂ ಜೂನ್ 21ರಂದು ನಡೆಯಲಿರುವ ಕೆಪಿಸಿಸಿ ಅಧ್ಯಕ್ಷರ ಪ್ರಮಾಣವಚನ ಕಾರ್ಯಕ್ರಮದ ಬಳಿಕ ಸಚಿವ ಸಂಪುಟ ವಿಸ್ತರಣೆ ಕಸರತ್ತು ಮತ್ತಷ್ಟು ವೇಗ ಪಡೆಯುವ ನಿರೀಕ್ಷೆಯಿದೆ
ಹೈಕಮಾಂಡ್ ಜೊತೆ ಮಹತ್ವದ ಸಭೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೂನ್ 23ರಂದು ದೆಹಲಿಗೆ ತೆರಳಲಿದ್ದು, ಜೂನ್ 24 ಮತ್ತು 25ರಂದು ಎಐಸಿಸಿ ನಾಯಕರೊಂದಿಗೆ ಸರಣಿ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ. ಈ ಸಭೆಗಳಲ್ಲಿ ಸಚಿವ ಸ್ಥಾನಕ್ಕೆ ಆಯ್ಕೆಯಾಗುವ ನಾಯಕರ ಅಂತಿಮ ಪಟ್ಟಿಗೆ ರೂಪುರೇಷೆ ಸಿಗುವ ಸಾಧ್ಯತೆ ಇದೆ.
ಇದನ್ನು ಓದಿ : ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ ಎಂದ ಮಾಜಿ ಸಿಎಂ Siddaramaiah..!!

20 ನಾಯಕರಿಗೆ ಸಚಿವ ಸ್ಥಾನ?
ಸಂಪುಟ ವಿಸ್ತರಣೆ ಪ್ರಕ್ರಿಯೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಒಂದೇ ಹಂತದಲ್ಲಿ ಸುಮಾರು 20 ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಹಳೆಯ ಮುಖಗಳಿಗೆ ಮರು ಅವಕಾಶ ಸಿಗುತ್ತದೆಯೇ ಅಥವಾ ಹೊಸ ಮುಖಗಳಿಗೆ ಆದ್ಯತೆ ನೀಡಲಾಗುತ್ತದೆಯೇ ಎಂಬುದರ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿದೆ.
‘ರಾಹುಲ್ ಗಾಂಧಿ ಸೂತ್ರ’ದ ಅಡಿಯಲ್ಲೇ ಸಂಪುಟ ವಿಸ್ತರಣೆ
ಈ ಬಾರಿಯ ಸಂಪುಟ ವಿಸ್ತರಣೆಯು ಸಂಪೂರ್ಣವಾಗಿ ‘ರಾಹುಲ್ ಗಾಂಧಿ ಸೂತ್ರ’ದ ಅಡಿಯಲ್ಲೇ ನಡೆಯಲಿದೆ ಎನ್ನಲಾಗುತ್ತಿದೆ. ಕಾರ್ಯಕ್ಷಮತೆ, ಸಾಮಾಜಿಕ ನ್ಯಾಯ ಹಾಗೂ ಯುವ ನಾಯಕತ್ವಕ್ಕೆ ಆದ್ಯತೆ ನೀಡುವ ರಾಹುಲ್ ಫಾರ್ಮುಲಾದ ಮಧ್ಯೆ, ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ತಮ್ಮ ಆಪ್ತ ವಲಯದ ಎಷ್ಟು ಜನರಿಗೆ ಮಂತ್ರಿ ಪಟ್ಟ ಕೊಡಿಸುವಲ್ಲಿ ಯಶಸ್ವಿಯಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನು ನೋಡಿ : ಎಣ್ಣೆ ಏಟಲ್ಲಿ ಸ್ನೇಹಿತರ ನಡುವೆ ಗಲಾಟೆ -ಸ್ನೇಹಿತನ ತಲೆಗೆ ಹೊಡೆದು ಭೀಕರ ಹ*.!




