Accident | ಸಿಗಂದೂರು ಚೌಡೇಶ್ವರಿ ದೇವಿಯ ದರ್ಶನಕ್ಕೆ ತೆರಳುವಾಗ ಕಾರು ಪಲ್ಟಿ : 6 ಜನರಿಗೆ ಗಂಭೀರ ಗಾಯ!

ಬೆಂಗಳೂರಿನಿಂದ ಸಿಗಂದೂರು ಚೌಡೇಶ್ವರಿ ದೇವಿಯ ದರ್ಶನಕ್ಕೆ ತೆರಳುತ್ತಿದ್ದ ಆರು ಮಂದಿ ಸ್ನೇಹಿತರಿದ್ದ ಕಾರು ಶಿವಮೊಗ್ಗ ತಾಲೂಕಿನ ಚೋರಡಿ ಸೇತುವೆ ಬಳಿ ಭೀಕರ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಮೂರು ಬಾರಿ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಆರು ಮಂದಿಗೂ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರು ಸಂಪೂರ್ಣ ಜಖಂ
ಬೆಂಗಳೂರಿನಿಂದ ಸಿಗಂದೂರು ಕ್ಷೇತ್ರದತ್ತ ಪ್ರಯಾಣಿಸುತ್ತಿದ್ದ ವೇಳೆ ಚೋರಡಿ ಬ್ರಿಡ್ಜ್ ಸಮೀಪ ಈ ಘಟನೆ ನಡೆದಿದೆ. ವೇಗವಾಗಿ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆಯಲ್ಲೇ ಮೂರು ಬಾರಿ ಉರುಳಿ ಬಿದ್ದಿದ್ದು, ವಾಹನ ಸಂಪೂರ್ಣವಾಗಿ ಜಖಂಗೊಂಡಿದೆ.
ಇದನ್ನು ಓದಿ : ಸಾರಿಗೆ ಬಸ್ಗಳ ನಡುವೆ ಡೆಡ್ಲಿ Accident – ಬಸ್ ಚಾಲಕರು ಸಾವು

ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ
ಇನ್ನು ಅಪಘಾತ ಸಂಭವಿಸಿದ ಬೆನ್ನಲ್ಲೇ ಸಾಗರ ಪೇಟೆ ಠಾಣೆಯ ಎಎಸ್ಐ ಮೀರಾಬಾಯಿ ಹಾಗೂ ಅವರ ಸಿಬ್ಬಂದಿ ಕರ್ತವ್ಯ ನಿಮಿತ್ತ ಅದೇ ರಸ್ತೆಯಲ್ಲಿ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದರು. ಪಲ್ಟಿಯಾದ ಕಾರನ್ನು ಗಮನಿಸಿದ ತಕ್ಷಣ ತಮ್ಮ ವಾಹನ ನಿಲ್ಲಿಸಿದ ಪೊಲೀಸರು, ಕ್ಷಣವೂ ತಡಮಾಡದೆ ಕಾರಿನೊಳಗೆ ಸಿಲುಕಿ ನರಳುತ್ತಿದ್ದ ಗಾಯಾಳುಗಳನ್ನು ಹೊರತೆಗೆದು ಪ್ರಥಮ ಚಿಕಿತ್ಸೆ ನೀಡಿದ್ದಾರೆ.
ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ನೋಡಿ : ದಲಿತರ ಮೇಲೆ ಇದೆಂಥಾ ದೌರ್ಜನ್ಯ? – ಗ್ರಾಮದಿಂದ ಬಹಿಷ್ಕಾರ ಹಾಕಿ ಹಲ್ಲೆ..!?




