ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – 3 ಮಂದಿ ದುರ್ಮರಣ

ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪ ನಡೆದಿದೆ.
ತುಮಕೂರಿನ ಮೂವರು ದಾರುಣ ಸಾವು!
ಮೃತರನ್ನು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಳಿಲ್ ಗದ್ದೆ ಗ್ರಾಮದ ನಿವಾಸಿಗಳಾದ ಗುರುಕಿರಣ್ (28), ಮೋಹನ್ (30) ಹಾಗೂ ಜ್ಞಾನೇಶ್ (28) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಪ್ರೇಮ್ ಕುಮಾರ್ ಹಾಗೂ ಹೃತಿಕ್ ಎಂದು ಗುರುತಿಸಲಾಗಿದ್ದು, ಇಬ್ಬರಿಗೂ ಗಂಭೀರ ಗಾಯಗಳಾಗಿವೆ.
ಇದನ್ನು ಓದಿ : ಸಿಗಂದೂರು ಚೌಡೇಶ್ವರಿ ದರ್ಶನಕ್ಕೆ ಹೊರಟಿದ್ದ ಕಾರು ಭೀಕರ Accident

ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಅಪಘಾತ
ಮೃತರು ಹಾಗೂ ಗಾಯಾಳುಗಳು ಒಂದೇ ಗ್ರಾಮದ ಸ್ನೇಹಿತರಾಗಿದ್ದು, ತುಮಕೂರಿನಿಂದ ಕಾರಿನಲ್ಲಿ ಧರ್ಮಸ್ಥಳಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ ಸಮೀಪ ರಸ್ತೆ ಬದಿ ನಿಲ್ಲಿಸಲಾಗಿದ್ದ ಸಿಲಿಂಡರ್ ಲಾರಿಗೆ ಕಾರು ವೇಗವಾಗಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಕಾರು ಸಂಪೂರ್ಣ ನಜ್ಜುಗುಜ್ಜು
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಶಬ್ದ ಕೇಳಿದ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹಾಸನದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ನೋಡಿ : T.B.JAYACHANDRA ಅಸಮಾಧಾನ ತಣಿಸಿದ CM D.K.SHIVAKUMAR




