Renukaswamy ಕೊಲೆ ಪ್ರಕರಣದ ಸಾಕ್ಷಿಗೆ ಬೆದರಿಕೆ ಪ್ರಕರಣ: ಪುನೀತ್ʼಗೆ ಮತ್ತೆ 5 ದಿನ ಪೊಲೀಸ್ ಕಸ್ಟಡಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಸಾಕ್ಷಿಗಳ ಮೇಲೆ ಒತ್ತಡ ಹೇರಿದ ಆರೋಪದ ಹಿನ್ನೆಲೆಯಲ್ಲಿ ಆರೋಪಿ ಪುನೀತ್ನನ್ನು ಮತ್ತೆ ಐದು ದಿನಗಳ ಕಾಲ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.
ಆರೋಪಿ ಮತ್ತೆ ಪೊಲೀಸ್ ಕಸ್ಟಡಿಗೆ
ತನಿಖೆಯ ವೇಳೆ ಪುನೀತ್ ತನ್ನ ಬಳಿಯಿದ್ದ ಮೊಬೈಲ್ಗಳನ್ನು ಬಚ್ಚಿಟ್ಟಿರುವುದಲ್ಲದೆ, ಅವುಗಳಲ್ಲಿದ್ದ ಮೆಸೇಜ್ಗಳನ್ನು ಡಿಲೀಟ್ ಮಾಡಿರುವ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯದ ಅನುಮತಿ ಪಡೆದು ಮತ್ತೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

ಪುನೀತ್ ಬಳಿಯಿದ್ದ ಐದು ಮೊಬೈಲ್ಗಳು ವಶ!
ಸಾಕ್ಷಿಗಳಿಗೆ ಬೆದರಿಕೆ ಹಾಕುವಂತೆ ಹೇಳದವರು ಯಾರು? ಇದರ ಹಿಂದೆ ಮತ್ತಾರಾದರೂ ಇದ್ದಾರೆಯೇ? ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಮೊಬೈಲ್ನಿಂದ ಅಳಿಸಲಾದ ಡೇಟಾವನ್ನು ಮರುಪಡೆಯುವ ಪ್ರಕ್ರಿಯೆಯೂ ನಡೆಯುತ್ತಿದೆ. ಪ್ರಕರಣ ಸಂಬಂಧ ಪುನೀತ್ ಬಳಸುತ್ತಿದ್ದ ಐದು ಮೊಬೈಲ್ ಫೋನ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನಿಖೆಯ ಪ್ರಕಾರ, ಆತ ಐದು ಮೊಬೈಲ್ಗಳನ್ನು ಬಳಸುತ್ತಿದ್ದ ಎನ್ನಲಾಗಿದೆ.
ಇದನ್ನು ಓದಿ : ರೇಣುಕಾಸ್ವಾಮಿ ಕೇಸ್ – ಸಾಕ್ಷಿದಾರನಿಗೆ ಬೆದರಿಕೆ ಹಾಕಿದವರು ಅರೆಸ್ಟ್.!

ವಾಟ್ಸ್ಆ್ಯಪ್ ಕಾನ್ಫರೆನ್ಸ್ ಕಾಲ್ ಮೂಲಕ ಕರೆ
ಸಾಕ್ಷಿಗಳಿಗೆ ವಾಟ್ಸ್ಆ್ಯಪ್ ಕಾನ್ಫರೆನ್ಸ್ ಕಾಲ್ ಮೂಲಕ ಕರೆ ಮಾಡಿ, ‘ವಕೀಲರು ಮಾತನಾಡುತ್ತಿದ್ದಾರೆ’ ಎಂದು ಹೇಳಿ ಬೆದರಿಕೆ ಹಾಕಲಾಗಿತ್ತು ಎಂಬ ಆರೋಪವೂ ಕೇಳಿಬಂದಿದೆ. ನಂತರ ಮೊಬೈಲ್ನಲ್ಲಿದ್ದ ಮಾಹಿತಿಯನ್ನು ಡಿಲೀಟ್ ಮಾಡಿ, ವಾಟ್ಸ್ಆ್ಯಪ್ ಅನ್ನು ಮತ್ತೆ Instal ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಡಿಜಿಟಲ್ ಸಾಕ್ಷ್ಯ ನಾಶಪಡಿಸಲು ಯತ್ನ
ಇನ್ನು ತನಿಖೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಡಿಜಿಟಲ್ ಸಾಕ್ಷ್ಯ ನಾಶಪಡಿಸಲು ಯತ್ನಿಸಲಾಗಿದೆ ಎಂಬ ಅನುಮಾನದ ಮೇರೆಗೆ, ವಶಪಡಿಸಿಕೊಂಡಿರುವ ಎಲ್ಲಾ ಮೊಬೈಲ್ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನಿಸಲಾಗಿದ್ದು, ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

ಇದೇ ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪ್ರಕರಣದ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನು ನೋಡಿ : ಭರ್ಜರಿ ಮಳೆಗೆ ಕುಸಿದ ರಸ್ತೆ KSRTC ಬಸ್ ನಿಲ್ದಾಣದ ರಸ್ತೆ ಸಂಚಾರ ಬಂದ್




