ರಾಜ್ಯದ 7.76 ಲಕ್ಷ ಅಕ್ರಮ BPL ಕಾರ್ಡ್ ಗಳನ್ನು ಗುರುತಿಸಿದ ಕೇಂದ್ರ ಸರ್ಕಾರ : ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿಕೆ

ರಾಜ್ಯದಲ್ಲಿ BPL (ಬಡತನ ರೇಖೆಗಿಂತ ಕೆಳಗಿರುವ) ಪಡಿತರ ಚೀಟಿಗಳ ಪರಿಷ್ಕರಣೆ ಕಾರ್ಯ ಭರದಿಂದ ಸಾಗುತ್ತಿದ್ದು, ಒಟ್ಟು 7.76 ಲಕ್ಷ ಅಕ್ರಮ ಬಿಪಿಎಲ್ ಕಾರ್ಡ್ಗಳನ್ನು ಗುರುತಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ಅರ್ಹ ಫಲಾನುಭವಿಗಳಿಗೆ ಮಾತ್ರ ಸರ್ಕಾರದ ಸೌಲಭ್ಯ
ಕೇಂದ್ರ ಸರ್ಕಾರದ ಮಾರ್ಗಸೂಚಿ ಹಾಗೂ ಲಭ್ಯವಿರುವ ಅಂಕಿ-ಅಂಶಗಳ ಆಧಾರದ ಮೇಲೆ ಈ ಪರಿಶೀಲನೆ ನಡೆಸಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಮಾತ್ರ ಸರ್ಕಾರದ ಸೌಲಭ್ಯಗಳು ತಲುಪಬೇಕು ಎಂಬ ಉದ್ದೇಶದಿಂದ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇದನ್ನು ಓದಿ : ನಿಮ್ಮ BPL ಕಾರ್ಡ್ ರದ್ದಾಗಿದ್ಯಾ ಹಾಗಾದ್ರೆ ಈಗಲೇ ಅರ್ಜಿ ಸಲ್ಲಿಸಿ!

50 ಶೇಕಡಾ ಪರಿಷ್ಕರಣೆ ಪೂರ್ಣ
ಸಚಿವರ ಮಾಹಿತಿ ಪ್ರಕಾರ, ಅಕ್ರಮ ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆ ಕಾರ್ಯ ಈಗಾಗಲೇ ಶೇಕಡಾ 50 ರಷ್ಟು ಪೂರ್ಣಗೊಂಡಿದೆ. ಪರಿಶೀಲನೆ ವೇಳೆ ಅನರ್ಹವಾಗಿ ಬಿಪಿಎಲ್ ಕಾರ್ಡ್ ಪಡೆದಿದ್ದ 4,32,795 ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಅವರ ಬಿಪಿಎಲ್ ಕಾರ್ಡ್ಗಳನ್ನು ಎಪಿಎಲ್ (ಬಡತನ ರೇಖೆಗಿಂತ ಮೇಲಿರುವ) ಕಾರ್ಡ್ಗಳಾಗಿ ಪರಿವರ್ತಿಸಲಾಗಿದೆ.
BPL – ಅನರ್ಹರ ವಿರುದ್ಧ ಕ್ರಮ
ಆರ್ಥಿಕವಾಗಿ ಸಬಲರಾಗಿದ್ದರೂ ಅಥವಾ ನಿಯಮಾವಳಿಗಳನ್ನು ಉಲ್ಲಂಘಿಸಿ ಬಿಪಿಎಲ್ ಸೌಲಭ್ಯ ಪಡೆಯುತ್ತಿದ್ದವರನ್ನು ಪಟ್ಟಿಯಿಂದ ಹೊರಗಿಡಲಾಗುತ್ತಿದೆ. ಈ ಮೂಲಕ ಸರ್ಕಾರದ ಸಬ್ಸಿಡಿ ಮತ್ತು ಕಲ್ಯಾಣ ಯೋಜನೆಗಳ ಲಾಭ ನಿಜವಾದ ಅರ್ಹರಿಗೆ ತಲುಪುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆ ಪ್ರಕ್ರಿಯೆ ಮುಂದುವರಿಯಲಿದ್ದು, ಉಳಿದ ಪ್ರಕರಣಗಳ ಪರಿಶೀಲನೆಯನ್ನೂ ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ.
ಇದನ್ನು ನೋಡಿ : ಸಿನಿಮಾ ಸ್ಟೈಲಲ್ಲಿ ಯುವಕನ ಕಿಡ್ನಾ* – ಮಾರಾಮಾರಿಯಲ್ಲಿ ಹಲವರಿಗೆ ಗಾಯ




