Chamarajanagar ಜಿಲ್ಲೆಯ ಕೊಳ್ಳೇಗಾಲದ ಹರಳೆ ಗ್ರಾಮದಲ್ಲಿ ಸೈಕಲ್ ಸವಾರಿ ಮಾಡುತ್ತಿದ್ದ 11 ವರ್ಷದ ಬಾಲಕನಿಗೆ ಟೆಂಪೋ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹರಳೆ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ 11 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಸೈಕಲ್ ಸವಾರಿ ಮಾಡುತ್ತಿದ್ದ ಬಾಲಕನಿಗೆ ವೇಗವಾಗಿ ಬಂದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.
ಮೃತ ಬಾಲಕನನ್ನು ಯಶವಂತ್ (11) ಎಂದು ಗುರುತಿಸಲಾಗಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಯಶವಂತ್ ಬೆಂಗಳೂರಿನಿಂದ ತನ್ನ ಅಜ್ಜಿಯ ಮನೆಗೆ ಬಂದಿದ್ದನು. ಕುಟುಂಬದವರು ಇತ್ತೀಚೆಗೆ ಅವನಿಗೆ ಹೊಸ ಸೈಕಲ್ ಕೊಡಿಸಿದ್ದರು ಎನ್ನಲಾಗಿದೆ.
MUST READ : ಸಚಿವ Zameer ಮನೆಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ!

ಘಟನೆ ವೇಳೆ ಯಶವಂತ್ ಸೈಕಲ್ ಸವಾರಿ ಮಾಡುತ್ತಿದ್ದಾಗ ಅತಿ ವೇಗದಲ್ಲಿ ಬಂದ ಟೆಂಪೋ ಯಮಸ್ವರೂಪಿಯಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ತೀವ್ರತೆಯಿಂದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ಕೊಳ್ಳೇಗಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಟೆಂಪೋವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಈ ದುರ್ಘಟನೆ ಗ್ರಾಮದಲ್ಲಿ ದುಃಖದ ವಾತಾವರಣವನ್ನು ಉಂಟುಮಾಡಿದ್ದು, ಬಾಲಕನ ಸಾವಿನಿಂದ ಕುಟುಂಬದವರು ಆಘಾತಕ್ಕೊಳಗಾಗಿದ್ದಾರೆ.
MUST WATCH : BENGALURU ಪೊಲೀಸರ ಭರ್ಜರಿ ಕಾರ್ಯಾಚರಣೆ – 9 ಕೋಟಿ ಮೌಲ್ಯದ DRUG SEIZE, ನಾಲ್ವರು ಅಂದರ್ | BENGALURU NEWS |




