Channagiri ತಾಲೂಕಿನ ಮರಬನಹಳ್ಳಿ ಗ್ರಾಮದಲ್ಲಿ ಆ್ಯಕ್ಸಲ್ ತುಂಡಾಗಿ ಸಾರಿಗೆ ಬಸ್ ಪಲ್ಟಿಯಾದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ..

ದಾವಣಗೆರೆ ಜಿಲ್ಲೆಯ Channagiri ತಾಲೂಕಿನ ಮರಬನಹಳ್ಳಿ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆ್ಯಕ್ಸಲ್ ತುಂಡಾದ ಪರಿಣಾಮ ಸಾರಿಗೆ ಬಸ್ ಪಲ್ಟಿಯಾಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಚಲಿಸುತ್ತಿದ್ದ ಸಾರಿಗೆ ಬಸ್ನ ಆ್ಯಕ್ಸಲ್ ಏಕಾಏಕಿ ತುಂಡಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.
ಅಪಘಾತದ ತೀವ್ರತೆಗೆ ಬಸ್ನಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
MUST READ : ಮದ್ಯ ಮಾರಾಟದ ಅಬ್ಬರ – 13 ವರ್ಷದ ದಾಖಲೆ ಉಡೀಸ್, ಆದಾಯ ಎಷ್ಟು?

ವಿದ್ಯಾರ್ಥಿ ಸಾವು, ಹಲವರಿಗೆ ಗಂಭೀರ ಗಾಯ
ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ದರ್ಶನ್ (21) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಸುಮಾರು 50 ಮಂದಿ ಗಾಯಗೊಂಡಿದ್ದು, ಇವರಲ್ಲಿ 20ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ತಕ್ಷಣವೇ ದಾವಣಗೆರೆ ಜಿಲ್ಲಾ ಆಸ್ಪತ್ರೆ ಹಾಗೂ ಬಸವಾಪಟ್ಟಣ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವೈದ್ಯರು ಗಂಭೀರ ಗಾಯಾಳುಗಳ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ.
ಈ ಅಪಘಾತ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ.
MUST WATCH : ಕೆಟ್ಟು ನಿಂತಿದೆ ಕುಡಿಯುವ ನೀರಿನ ಘಟಕ – ವರ್ಷದಿಂದ ನೀರಿಲ್ಲದೇ ಗ್ರಾಮಸ್ಥರ ಪರದಾಟ..! | SIRA NEWS |




