Channapatna ತಾಲೂಕಿನ ಮಂಗಾಡಹಳ್ಳಿ ಬಳಿ ಕಾಡಾನೆ ದಾಳಿಯಲ್ಲಿ ಗಾಯಗೊಂಡ ರೈತ ಕಾಂತರಾಜು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

Channapatna ತಾಲೂಕಿನ ಮಂಗಾಡಹಳ್ಳಿ ಗ್ರಾಮದ ಬಳಿ ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ದುಃಖದ ಘಟನೆ ನಡೆದಿದೆ. ಕಾಂತರಾಜು (53) ಎಂಬ ರೈತ ಏಪ್ರಿಲ್ 19ರಂದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿ ಹೊಟ್ಟೆ ಭಾಗದಲ್ಲಿ ಗಂಭೀರ ಗಾಯಗೊಳಿಸಿತ್ತು.
MUST READ : CSK vs MI : ಇದು ನಮ್ಮ ಸೀಸನ್ ಅಲ್ಲ – ದುಃಖಿತರಾದ ಹಾರ್ದಿಕ್ ಪಾಂಡ್ಯ..!!
ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಹಲವು ದಿನಗಳ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಮತ್ತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಚನ್ನಪಟ್ಟಣ ಭಾಗದಲ್ಲಿನ ಕಾಡಾನೆ ಹಾವಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
MUST WATCH : ಸಿದ್ಧಗಂಗಾ ಮಠಕ್ಕೆ VIJAYENDRA VISIT – BSY ಅಭಿಮಾನೋತ್ಸವಕ್ಕೆ ಭರ್ಜರಿ ಸಿದ್ಧತೆ..!




