
PAVAGADA ಸರ್ಕಾರಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಆರೋಪ!
ಬಡ ಮತ್ತು ಸಾಮಾನ್ಯ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಬೇಕಾದ ಸರ್ಕಾರಿ ಆಸ್ಪತ್ರೆಯಲ್ಲೇ ಅವ್ಯವಸ್ಥೆಯ ಆರೋಪ ಕೇಳಿಬಂದಿದೆ. ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ನಾಯಿಗಳ ಹಾವಳಿ, ವೈದ್ಯರ ಗೈರುಹಾಜರಿ, ಸ್ವಚ್ಛತೆಯ ಕೊರತೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ತಲೆದೋರಿವೆ.

ವೈದ್ಯಕೀಯ ಸೇವೆಗಾಗಿ ರೋಗಿಗಳ ಪರದಾಟ
ಹೌದು.. ಪಾವಗಡ ಸರ್ಕಾರಿ ಆಸ್ಪತ್ರೆಗೆ ಪ್ರತಿದಿನ ನೂರಾರು ರೋಗಿಗಳು ಚಿಕಿತ್ಸೆಗಾಗಿ ಬರುತ್ತಾರೆ. ಆದರೆ ಆಸ್ಪತ್ರೆಯಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದ್ದು, ವಿಶೇಷವಾಗಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಅಗತ್ಯ ಚಿಕಿತ್ಸೆ ಮತ್ತು ಆರೈಕೆ ಸಿಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.
READ THIS : ಖಾಸಗಿ ಆಸ್ಪತ್ರೆಗಳಿಗೆ ಶಾಕ್ – ಡೆಡ್ಬಾಡಿ ಮೇಲೆ ಬಿಲ್ ವಸೂಲಿ ಬಂದ್!

ಆಸ್ಪತ್ರೆಯ ವ್ಯವಸ್ಥೆ ಬಗ್ಗೆ ಸಾರ್ವಜನಿಕರ ಆಕ್ರೋಶ
ಪುರುಷರು ಮತ್ತು ಮಹಿಳೆಯರಿಗೆ ಒಂದೇ ಚುಚ್ಚುಮದ್ದು ಕೊಠಡಿ ಬಳಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಆಸ್ಪತ್ರೆ ಆವರಣದಲ್ಲಿ ನಾಯಿಗಳ ಹಾವಳಿಯೂ ಹೆಚ್ಚಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹತ್ತಾರು ಸಮಸ್ಯೆಗಳಿವೆ.
PAVAGADA – ಸಮಸ್ಯೆಗಳು ಅಧಿಕಾರಿಗಳ ಗಮನಕ್ಕೆ ಬಂದಿಲ್ಲವೇ?
ಆಸ್ಪತ್ರೆಯಲ್ಲಿ ಇಷ್ಟೊಂದು ಸಮಸ್ಯೆಗಳಿದ್ರೂ ಆಡಳಿತ ವ್ಯವಸ್ಥೆ ಯಾವ ಕ್ರಮ ಕೈಗೊಂಡಿದೆ? ಈ ಸಮಸ್ಯೆಗಳು ಮೇಲಾಧಿಕಾರಿಗಳ ಗಮನಕ್ಕೆ ಬಂದಿಲ್ಲವೇ? ಎಂಬ ಪ್ರಶ್ನೆಗಳು ಸಾರ್ವಜನಿಕರಲ್ಲಿ ಮೂಡಿವೆ. ಇನ್ನಾದ್ರೂ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರಾ? ಎಂಬುದನ್ನು ಕಾದುನೋಡಬೇಕಿದೆ.

MUST WATCH : ಸ್ಟಿಂಗ್ ಸೂತ್ರಧಾರರ ಬಂಧನಕ್ಕೆ ಆಗ್ರಹ! ಸ್ಟಿಂಗ್ ಪ್ರಕರಣಕ್ಕೆ HDK ಖಡಕ್ ತಿರುಗೇಟು!




