ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿ ನವವಿವಾಹಿತೆ ಸ್ಥಳದಲ್ಲೇ ಕೊನೆಯುಸಿರೆಳೆದ ಘಟನೆ Chikkaballapura ಜಿಲ್ಲೆಯಲ್ಲಿ ಸಂಭವಿಸಿದೆ.

ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾದ ಪರಿಣಾಮ ನವವಿವಾಹಿತೆ ದಾರುಣವಾಗಿ ಸಾವನ್ನಪ್ಪಿ, ಪತಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. Chikkaballapura ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗೂಳೂರು ರಸ್ತೆಯ ಚಿನ್ನೇಪಲ್ಲಿ ಕ್ರಾಸ್ನ ಆರ್.ಎಸ್. ಕಲ್ಯಾಣ ಮಂಟಪದ ರಸ್ತೆಯಲ್ಲಿ ಘಟನೆ ನೆನ್ನೆ ಸಂಭವಿಸಿದೆ.
ಇದನ್ನು ಓದಿ : Belagavi|ಬುದ್ಧಿಮಾಂದ್ಯ ಮಕ್ಕಳಿಗೆ ಟಾರ್ಚರ್ ಕೊಟ್ಟ ದಂಪತಿ ಅರೆಸ್ಟ್..!
ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ
ರಸ್ತೆ ಮೇಲೆ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ಗೆ ನವವಿವಾಹಿತ ದಂಪತಿ ತೆರಳುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ವರ್ಷಿಣಿ ಸ್ಥಳದಲ್ಲೇ ಮೃತಪಟ್ಟಿದ್ದು, ಸವಾರ ಸುರೇಂದ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಸುರೇಂದ್ರರನ್ನು ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ನವವಿವಾಹಿತೆ ಸಾವು
ಮೃತ ವರ್ಷಿಣಿ ಬಾಗೇಪಲ್ಲಿ ತಾಲೂಕಿನ ಚೆಂಚುರಾಯನಪಲ್ಲಿ ಗ್ರಾಮದವರು. ಕಳೆದ ಮೂರು ತಿಂಗಳ ಹಿಂದೆಯಷ್ಟೇ ಸುರೇಂದ್ರ ಅವರ ಜೊತೆಗೆ ಮದುವೆಯಾಗಿದ್ದರು ಎಂದು ತಿಳಿದುಬಂದಿದೆ. ಇನ್ನು ಘಟನೆಯ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಇದನ್ನು ನೋಡಿ : ಡಿ. 26ರಿಂದ ಟ್ರೈನ್ ಟಿಕೆಟ್ ಬೆಲೆಯಲ್ಲಿ ಅಲ್ಪ ಹೆಚ್ಚಳ




