ಬಲ್ಕರ್-ಬೊಲೆರೋ ನಡುವೆ Accident – ಸ್ಥಳದಲ್ಲೇ ಇಬ್ಬರು ಚಾಲಕರು ಸಾವು.

ತಡರಾತ್ರಿ ಬಲ್ಕರ್ ಹಾಗೂ ಬೊಲೆರೋ ನಡುವೆ ಮುಖಾಮುಖಿ ಡಿಕ್ಕಿಯಾಗಿ Accident ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಚಾಲಕರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಪೋತೆನಹಳ್ಳಿ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಗೌರಿಬಿದನೂರು ತಾಲೂಕಿ ಜಕ್ಕೇನಹಳ್ಳಿ ಗ್ರಾಮದ ಅಶೋಕ್ ಹಾಗೂ ಆಂದ್ರಪ್ರದೇಶದ ಸಂಜೀವನರಾಯನಪಲ್ಲಿ ನಿವಾಸಿ ನಾಗರಾಜಪ್ಪ ಎಂದು ಗುರುತಿಸಲಾಗಿದೆ.
ಇದನ್ನು ಓದಿ : ‘ಡೆವಿಲ್’ ಸಿನಿಮಾ ವೀಕ್ಷಿಸಿದ ದರ್ಶನ್ ತಾಯಿ ಮೀನಾ

ಚಾಲಕರು ಸ್ಥಳದಲ್ಲೇ ಸಾವು
ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಬಲ್ಕರ್ ವಾಹನವು ಗೌರಿಬಿದನೂರು ಕಡೆಯಿಂದ ಹಿಂದೂಪುರ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದರೆ, ಬೆಂಗಳೂರಿನಿಂದ ಬುಲೆರೋ ವಾಹನವು ಗೌರಿಬಿದನೂರು ಕಡೆಗೆ ಬರುತ್ತಿತ್ತು. ಈ ವೇಳೆ ಪೋತೆನಹಳ್ಳಿ ಬಳಿ ನಿಯಂತ್ರಣ ತಪ್ಪಿ ಎರಡೂ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಎರಡು ವಾಹನಗಳ ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪ್ರಕರಣ ದಾಖಲು
ಇನ್ನು ಅಪಘಾತದ ವಿಷಯ ತಿಳಿದು ಮಂಚೇನಹಳ್ಳಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

ಇದನ್ನು ನೋಡಿ : ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ ಮಧ್ಯೆ ಬಡಿದಾಟ




