Chikkaballapura ದಲ್ಲಿ ನಂದಿನಿ ಮಿಲ್ಕ್ ಪಾರ್ಲರ್ಗೆ ಬೆಂಕಿ ಕಾಣಿಸಿಕೊಂಡ ಘಟನೆ ಬಳಿಕ ಮಾಲೀಕ ವೆಂಕಟೇಶ್ ಅವರು ಶಾಕ್ನಿಂದ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.

Chikkaballapura ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ ಇರುವ ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಸೋಮವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಕಾಣಿಸಿಕೊಂಡಿರುವ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪಾರ್ಲರ್ ಮಾಲೀಕ ವೆಂಕಟೇಶ್ ಅವರು ತೀವ್ರ ಆಘಾತಕ್ಕೊಳಗಾಗಿ ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಬೆಂಕಿ ನಂದಿಸಿದ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದರು
ಮೃತರನ್ನು ಕಣಜೇನಹಳ್ಳಿ ಗ್ರಾಮದ ವೆಂಕಟೇಶ್ (55) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಪಾರ್ಲರ್ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಮಾಹಿತಿ ಅವರಿಗೆ ತಲುಪಿತ್ತು.
ತಕ್ಷಣ ಸ್ಥಳಕ್ಕೆ ಬಂದ ವೆಂಕಟೇಶ್ ಅವರು ಸ್ಥಳೀಯರ ಸಹಾಯದಿಂದ ಬೆಂಕಿಯನ್ನು ನಿಯಂತ್ರಿಸಿ ನಂದಿಸಿದರು. ಆದರೆ, ಬೆಂಕಿ ನಂದಿಸಿದ ಕೆಲವೇ ಕ್ಷಣಗಳಲ್ಲಿ ಅವರು ಅಂಗಡಿ ಮುಂಭಾಗದಲ್ಲೇ ಏಕಾಏಕಿ ಕುಸಿದು ಬಿದ್ದರು.
MUST READ : Dina Bhavishaya : ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಭರಪೂರ ಯಶಸ್ಸು, ಸುಖ-ಸಮೃದ್ಧಿ..!

ಆಸ್ಪತ್ರೆಗೆ ಕರೆದೊಯ್ಯುವ ಮುನ್ನವೇ ಸಾವು
ವೆಂಕಟೇಶ್ ಅವರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರು. ಆದಾಗ್ಯೂ, ವೈದ್ಯರು ಅವರು ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ವೆಂಕಟೇಶ್ ಅವರು ಹಲವು ವರ್ಷಗಳಿಂದ ಇದೇ ನಂದಿನಿ ಮಿಲ್ಕ್ ಪಾರ್ಲರ್ ನಡೆಸಿಕೊಂಡು ಕುಟುಂಬವನ್ನು ನಿರ್ವಹಿಸುತ್ತಿದ್ದರು. ಅವರ ಹಠಾತ್ ನಿಧನದಿಂದ ಕುಟುಂಬಸ್ಥರು, ಸ್ನೇಹಿತರು ಹಾಗೂ ಸ್ಥಳೀಯರಲ್ಲಿ ತೀವ್ರ ಶೋಕ ಆವರಿಸಿದೆ.
ಸದ್ಯ Nandini Milk Parlour Fire Accidentಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿ ಅವಘಡದ ಕಾರಣ ಕುರಿತು ತನಿಖೆ ಮುಂದುವರಿದಿದೆ.
MUST WATCH : ಟೈರ್ ಬ್ಲಾಸ್ಟ್ ಆಗಿ KSRTC ಬಸ್ ಪಲ್ಟಿ – ಸ್ಥಳದಲ್ಲೇ ಇಬ್ಬರು ಸಾ 60 ಮಂದಿಗೆ ಗಾಯ | CHAMARAJANAGARA NEWS |




