Chikkamagaluru ನ ಉಂಡೇದಾಸರಹಳ್ಳಿ ಬಡಾವಣೆಯಲ್ಲಿ ಬಾವಿ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಕಾರ್ಮಿಕ ಸಾವನ್ನಪ್ಪಿದ ಘಟನೆ ನಡೆದಿದೆ. ಘಟನೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

Chikkamagaluru ನಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ಬಾವಿ ಸ್ವಚ್ಛಗೊಳಿಸುವ ವೇಳೆ ಆಮ್ಲಜನಕದ ಕೊರತೆಯಿಂದ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದಾನೆ.
ನಗರದ ಉಂಡೇದಾಸರಹಳ್ಳಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮೋಹನ್ (40) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ದರ್ಶನ್ ಎಂಬವರ ಮನೆಯ ಬಾವಿ ಕ್ಲೀನ್ ಮಾಡಲು ಮೋಹನ್ ತೆರಳಿದ್ದರು.
READ THIS : ಕ್ಷುಲಕ ವಿಚಾರಕ್ಕೆ ಆಟೋ ಚಾಲಕನ ಬರ್ಬರ Murder!
ಬಾವಿಯ ಒಳಗೆ ಇಳಿದ ವೇಳೆ ಮೋಹನ್ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಆಮ್ಲಜನಕದ ಕೊರತೆಯಿಂದ ಅವರು ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
MUST WATCH : PETROL , DIESEL ದರ ಮತ್ತೆ ಏರಿಕೆ ಇಂದಿನ ರೇಟ್ ಕೇಳಿದ್ರೆ ಶಾಕ್ ಆಗ್ತೀರಾ




