Chinnaswamy Stadium ನಲ್ಲಿ ನಡೆಯಬೇಕಿದ್ದ ವಿಜಯ್ ಹಜಾರೆ ಪಂದ್ಯಕ್ಕೆ ಅನುಮತಿ ನಿರಾಕರಣೆ – ವಿರಾಟ್ ಕೊಹ್ಲಿ ಆಡೋದೇ ತಪ್ಪಾ?

ನಾಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ವಿಜಯ್ ಹಜಾರೆ ಟ್ರೋಫಿ ಟೂರ್ನಿಯ ದೆಹಲಿ ಮತ್ತು ಆಂಧ್ರಪ್ರದೇಶ ನಡುವಿನ ಪಂದ್ಯಕ್ಕೆ ಬೆಂಗಳೂರು ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.
ಹೀಗಾಗಿ ಪಂದ್ಯವನ್ನು ಬೆಂಗಳೂರಿನ ಹೊರವಲಯದಲ್ಲಿರುವ BCCI ನಿರ್ಮಿತ ಸೆಂಟರ್ ಆಫ್ ಎಕ್ಸೆಲೆನ್ಸ್ ಮೈದಾನಕ್ಕೆ ಸ್ಥಳಾಂತರಿಸಲಾಗಿದೆ.
ದೆಹಲಿ ತಂಡದ ಪರವಾಗಿ ಕಣಕ್ಕೆ
ಈ ಪಂದ್ಯದಲ್ಲಿ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಮೊದಲ ಬಾರಿಗೆ ದೆಹಲಿ ತಂಡದ ಪರವಾಗಿ ಕಣಕ್ಕಿಳಿಯಲಿದ್ದಾರೆ. ಆದರೆ ಭದ್ರತಾ ಕಾರಣಗಳಿಂದಾಗಿ ಸೆಂಟರ್ ಆಫ್ ಎಕ್ಸೆಲೆನ್ಸ್ ಮೈದಾನದಲ್ಲಿ ನಡೆಯುವ ಈ ಪಂದ್ಯವನ್ನು ಪ್ರೇಕ್ಷಕರಿಲ್ಲದೆ ಆಯೋಜಿಸಲಾಗುತ್ತದೆ.
ಇದನ್ನು ಓದಿ : ಸಚಿವ ಸ್ಥಾನದಿಂದ ವಜಾ ಬಳಿಕ ರಾಹುಲ್ ಗಾಂಧಿಗೆ ರಾಜಣ್ಣ ಪತ್ರ
ಅನುಮತಿ ನಿರಾಕರಣೆಗೆ ಕಾರಣವೇನು?
ಪಂದ್ಯ ಆಯೋಜನೆ ಸಂಬಂಧ ಸೋಮವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು Chinnaswamy Stadium ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಅಗ್ನಿಶಾಮಕ ದಳದ ಅಧಿಕಾರಿಗಳೂ ಸಹ ಸುರಕ್ಷತಾ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು.

ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುವ ಸಾಧ್ಯತೆ
ಪರಿಶೀಲನೆಯ ಬಳಿಕ ಸ್ಟೇಡಿಯಂನಲ್ಲಿ ಇನ್ನಷ್ಟು ಸುರಕ್ಷತಾ ಕ್ರಮ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದು, ವಿಶೇಷವಾಗಿ ವಿರಾಟ್ ಕೊಹ್ಲಿ ಆಗಮನದಿಂದಾಗಿ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುವ ಸಾಧ್ಯತೆ ಇದೆ ಎಂಬ ಆತಂಕ ಪೊಲೀಸರು ವ್ಯಕ್ತಪಡಿಸಿದ್ದಾರೆ.
ಸ್ಟೇಡಿಯಂ ಗೇಟ್ ಹೊರಭಾಗದಲ್ಲಿ ಹಿಂದೆಯೇ ಕಾಲ್ತುಳಿತ ಸಂಭವಿಸಿದ್ದ ಹಿನ್ನೆಲೆ, ಮತ್ತೊಮ್ಮೆ ಅಂಥ ಘಟನೆ ಸಂಭವಿಸುವ ಭೀತಿಯಿಂದ ಅನುಮತಿ ನಿರಾಕರಿಸಲಾಗಿದೆ. ಇನ್ನು ಗೇಟ್ ಅಗಲೀಕರಣ, ಜನ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಇಲ್ಲದಿರುವುದೂ ನಿರಾಕರಣೆಗೆ ಪ್ರಮುಖ ಕಾರಣವಾಗಿದೆ.
ಸೆಂಟರ್ ಆಫ್ ಎಕ್ಸೆಲೆನ್ಸ್ ಕುರಿತು
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿರುವ 40 ಎಕರೆ ವಿಸ್ತೀರ್ಣದ ಸೆಂಟರ್ ಆಫ್ ಎಕ್ಸೆಲೆನ್ಸ್ ಕ್ಯಾಂಪಸ್ನಲ್ಲಿ ಐಸಿಸಿಯ ನಿಯಮಾನುಸಾರ ನಿರ್ಮಿಸಲಾದ ಮೂರು ಪ್ರಥಮ ದರ್ಜೆ ಕ್ರಿಕೆಟ್ ಮೈದಾನಗಳಿವೆ.
ಈ ಸೌಲಭ್ಯವನ್ನು 2024ರಲ್ಲಿ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಕಾರ್ಯದರ್ಶಿಯಾಗಿದ್ದ ಜಯ್ ಶಾ ಉದ್ಘಾಟಿಸಿದ್ದರು.

ಇದನ್ನು ನೋಡಿ : ಹಾಸನ|ಮಗುವಿಗೆ ಜನ್ಮ ನೀಡಿದ ಬಾಲಕಿ; ಆರೋಪಿ ಸೆರೆ




