Chitradurga : ಬೈಕಿಗೆ ಅಡ್ಡಬಂದ ನಾಯಿಯನ್ನು ತಪ್ಪಿಸಲು ಮುಂದಾದ ಎಎಸ್ಐ ಬೈಕ್ನಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಕ್ರಾಸ್ ಬಳಿ ನಡೆದಿದೆ.

Chitradurga : ಬೈಕಿಗೆ ಅಡ್ಡಬಂದ ನಾಯಿಯನ್ನು ತಪ್ಪಿಸಲು ಪ್ರಯತ್ನಿಸಿದ ವೇಳೆ ಬೈಕ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸಹಾಯಕ ಉಪನಿರೀಕ್ಷಕ (ಎಎಸ್ಐ) ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಕ್ರಾಸ್ ಬಳಿ ನಡೆದಿದೆ.
ನಾಯಿ ತಪ್ಪಿಸಲು ಹೋಗಿ ಬೈಕ್ನಿಂದ ಬಿದ್ದು ಸಾವು
ಪರಶರಾಂಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಮಂಜುನಾಥ್ (50) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಐಮಂಗಲ ಪೊಲೀಸ್ ತರಬೇತಿ ಶಾಲೆಯಿಂದ ಕರ್ತವ್ಯ ಮುಗಿಸಿಕೊಂಡು ವಾಪಸ್ಸಾಗುವ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಬಸ್ ಡಿಕ್ಕಿಯಾಗಿ ನಾಲ್ವರು ಸಾವು, 9 ಮಂದಿಗೆ ಗಾಯ..!
ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲು
ಬೈಕ್ನಲ್ಲಿದ್ದ ಮತ್ತೋರ್ವ ಪೊಲೀಸ್ ಪೇದೆ ಸೂರ್ಯಪ್ರಭಾಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಳ್ಳಕೆರೆ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಕುರಿತು ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
MUST WATCH : ವಿದ್ಯಾರ್ಥಿಗಳ ಮೇಲೆ ಯುವಕರಿಂದ ಹಲ್ಲೆ ಓಡಾಡಲು ಭಯಪಡುತ್ತಿರೋ ಸ್ಟೂಡೆಂಟ್ಸ್




