Chitradurga Bus Accident : ಹಿರಿಯೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೂರಿಸ್ಟ್ ಬಸ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿತ್ತು. ಈ ದುರಂತದಲ್ಲಿ ಇದೀಗ ಸಾವಿನ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ.

Chitradurga Bus Accident : ಡಿಸೆಂಬರ್ 25ರಂದು ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಖಾಸಗಿ ಬಸ್ ದುರಂತದಲ್ಲಿ ಮತ್ತೊಬ್ಬ ಪ್ರಯಾಣಿಕ ಇಂದು ಸಾವನ್ನಪ್ಪಿದ್ದಾರೆ.
ಹಿರಿಯೂರು ಖಾಸಗಿ ಬಸ್ ದುರಂತದಲ್ಲಿ ಮತ್ತೊಬ್ಬ ಪ್ರಯಾಣಿಕ ಸಾವು
ಮಂಜುನಾಥ್ ಎಂಬುವರು ಇಂದು ಬೆಳಗ್ಗೆ 9:30ಕ್ಕೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇದರಿಂದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಹಿರಿಯೂರು ತಾ. ಜವನಗೊಂಡನಹಳ್ಳಿ ಬಳಿ ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಟೂರಿಸ್ಟ್ ಬಸ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು.
ಇದನ್ನೂ ಓದಿ : Chitradurga Bus Accident : ಚಿಕಿತ್ಸೆ ಪಡೆಯುತ್ತಿದ್ದ ಬಸ್ ಚಾಲಕ ಸಾವು – ಮೃತರ ಸಂಖ್ಯೆ 7ಕ್ಕೆ ಏರಿಕೆ ..!!
ಸಾವಿನ ಸಂಖ್ಯೆ 8ಕ್ಕೆ ಏರಿಕೆ
ಬಸ್ನಲ್ಲಿ ಸುಮಾರು 32 ಪ್ರಯಾಣಿಕರು ಇದ್ದರು. ಈ ಅಪಘಾತದಲ್ಲಿ ಈಗಾಗಲೇ ಚಾಲಕ ಸೇರಿ 5 ಪ್ರಯಾಣಿಕರು ಮತ್ತು ಲಾರಿ ಚಾಲಕ ಮೃತಪಟ್ಟಿದ್ದು, ಮಂಜುನಾಥ್ ಅವರ ಸಾವಿನಿಂದ ಈ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಗಾಯಾಳು ಮಂಜುನಾಥ್ ದೇಹದ ಸುಮಾರು 40% ಸುಟ್ಟಿದ್ದ ಕಾರಣ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ.

ಇನ್ನೂ ಹಲವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
ಅಪಘಾತದಲ್ಲಿ ಇನ್ನೂ ಹಲವರು ಗಾಯಗೊಂಡಿದ್ದು, ಅವರನ್ನು ಚಿತ್ರದುರ್ಗ, ದಾವಣಗೆರೆ ಮತ್ತು ಬೆಂಗಳೂರಿನ ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ.
ಬಸ್ ಚಾಲಕನ ನಿದ್ರಾಹೀನತೆ ಮತ್ತು ಓವರ್ಸ್ಪೀಡ್ ಕಾರಣ ಎನ್ನಲಾಗಿದೆ. ಲಾರಿ ಚಾಲಕ ಕೂಡ ಓವರ್ಸ್ಪೀಡ್ ಮಾಡುತ್ತಿದ್ದು ಆತನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಡಿಕ್ಕಿಯ ನಂತರ ಬಸ್ ಹೊತ್ತಿ ಉರಿದಿದ್ದರಿಂದ ಕೆಲವು ಪ್ರಯಾಣಿಕರು ಹೊರಬರಲು ಸಾಧ್ಯವಾಗಲಿಲ್ಲ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಮಂಜುನಾಥ್ ಸೇರಿದಂತೆ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳು ಆಘಾತಕ್ಕೊಳಗಾಗಿದ್ದು, ಸರ್ಕಾರದಿಂದ ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಲಾಗಿದೆ. ಗಾಯಾಳುಗಳ ಚಿಕಿತ್ಸೆಗೆ ಸಂಪೂರ್ಣ ಸಹಾಯ ಒದಗಿಸುವಂತೆ ಸರ್ಕಾರ ಭರವಸೆ ನೀಡಿದೆ.

MUST WATCH : ಚಿತ್ರದುರ್ಗದಲ್ಲಿ ಭೀಕರ ಬಸ್ ದುರಂತ ಬಸ್ ನಲ್ಲಿ ಇದ್ದವರು ಸಜೀವ ದಹ*




