Chitradurga | ವಿದ್ಯಾರ್ಥಿಗಳಿದ್ದ ಬಸ್ ಪಲ್ಟಿ – ಮೂವರು ಸಾವು, ಹಲವರಿಗೆ ಗಾಯ

ಗೋವಾ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ವಿದ್ಯಾರ್ಥಿಗಳಿದ್ದ ಖಾಸಗಿ ಟೂರಿಸ್ಟ್ ಬಸ್ವೊಂದು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ರೆ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ಇಂದು ಬೆಳಗಿನ ಜಾವ ನಡೆದಿದೆ. ಮೃತರನ್ನು ಬಸ್ ಚಾಲಕ ಗುರುಪ್ರಸಾದ್, ಕ್ಲೀನರ್ ಶಂಕರ್ ಎಂದು ಗುರುತಿಸಲಾಗಿದ್ದು, ಮತ್ತೋರ್ವ ವ್ಯಕ್ತಿಯ ಗುರುತು ಇನ್ನು ಪತ್ತೆಯಾಗಿಲ್ಲ.
READ THIS : 2 ಕಾರಿಗೆ ಡಿಕ್ಕಿ ಹೊಡೆದ ಲಾರಿ – ಸರಣಿ ಅಪಘಾತಕ್ಕೆ ಇಬ್ಬರು ಬಲಿ.!

ಮೂವರು ಸಾವು – ಹಲವರಿಗೆ ಗಾಯ
ಬೆಂಗಳೂರಿನ ಯೂನಿವರ್ಸಲ್ ಕಾಲೇಜಿನ ಬಿಎಸ್ಸಿ ನರ್ಸಿಂಗ್ ಮೂರನೇ ವರ್ಷದ 53 ವಿದ್ಯಾರ್ಥಿಗಳು ಗೋವಾಕ್ಕೆ ಪ್ರವಾಸ ತೆರಳಿದ್ದರು. ಗುರುವಾರ ಗೋವಾ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ, ಇಂದು ಬೆಳಗಿನ ಜಾವ ಐಮಂಗಲ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಟ್ರಂಚ್ಗೆ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ರೆ, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಅಪಘಾತಕ್ಕೆ ಕಾರಣವೇನು?
ಇನ್ನು ಬಸ್ ಚಾಲಕ ನಿದ್ರೆಗೆ ಜಾರಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗ್ತಿದ್ದು, ಸದ್ಯ ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣವೇ ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಘಟನೆ ಸಂಬಂಧ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

MUST WATCH : ದೇವೇಗೌಡರನ್ನ ಭೇಟಿಯಾದ ರಾಜೇಂದ್ರ – ರಾಜ್ಯ ರಾಜಕಾರಣದಲ್ಲಿ ಸಂಚಲನ




