Chitradurga ತಾಲೂಕಿನ ಗೊಡಬನಹಾಳ್ ಗ್ರಾಮದಲ್ಲಿ ಹಲವು ದಿನಗಳಿಂದ ಭೀತಿ ಸೃಷ್ಟಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ಸೆರೆ ಹಿಡಿದಿದೆ.

Chitradurga ಜಿಲ್ಲೆಯ ಗೊಡಬನಹಾಳ್ ಗ್ರಾಮದಲ್ಲಿ ಎರೆ ಹೊಲದ ಬಳಿ ಕಾಣಿಸಿಕೊಂಡಿದ್ದ ಚಿರತೆ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸಿತ್ತು. ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಬೆಳಗ್ಗಿನಿಂದಲೇ ಚಿರತೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ಆರಂಭಿಸಿದ್ದರು.
MUST READ : ರಾಜ್ಯದ ವಿದ್ಯಾರ್ಥಿಗಳಿಗೆ Bus Pass ಶುಲ್ಕ ಮರುಪಾವತಿ – ಇಲ್ಲಿದೆ ಸಂಪೂರ್ಣ ಮಾಹಿತಿ

ಚಿರತೆ ನಿರಂತರವಾಗಿ ಸ್ಥಳ ಬದಲಾಯಿಸುತ್ತಿದ್ದರಿಂದ ಕಾರ್ಯಾಚರಣೆ ಸಾಕಷ್ಟು ಸವಾಲಿನದ್ದಾಗಿತ್ತು. ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕೊನೆಗೆ ಸಂಜೆ ವೇಳೆಗೆ ಚಿರತೆಗೆ ಅರವಳಿಕೆ ಮದ್ದು ನೀಡಿ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ.
ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಚಿರತೆ ಸೆರೆ ಸಿಕ್ಕಿದ್ದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
MUST WATCH : DUDHAKAR ON PRADEEP ESHWAR | ವೇದಿಕೆಲಿ ಬೆಕ್ಕಿನಂತೆ ಇದ್ದು ಹೊರಗಡೆ ಬಂದು ಪೌರುಷ ತೋರಿಸಿದ್ರೆ ಜನ ಸುಮ್ನಿರ್ತಾರಾ.




