ಸಿವಿಲ್ Police Constable ಪರೀಕ್ಷೆಯ ಕೀ ಉತ್ತರ ಪ್ರಕಟ: ಆಗಸ್ಟ್ 6ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

Police Constable Exam : ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (CPC) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯ ‘ಸಾಮಾನ್ಯ ಜ್ಞಾನ’ ವಿಷಯದ ತಾತ್ಕಾಲಿಕ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
ಆಗಸ್ಟ್ 2ರಂದು ನಡೆದ ಪರೀಕ್ಷೆಯ ಕೀ ಉತ್ತರಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಅವುಗಳನ್ನು ಪರಿಶೀಲಿಸಬಹುದು. ಪ್ರಕಟಿತ ಕೀ ಉತ್ತರಗಳ ಬಗ್ಗೆ ಯಾವುದೇ ಆಕ್ಷೇಪಣೆಗಳಿದ್ದರೆ, ಅಭ್ಯರ್ಥಿಗಳು ಆಗಸ್ಟ್ 6ರ ಬೆಳಿಗ್ಗೆ 10:30 ಗಂಟೆಯೊಳಗೆ KEA ಆನ್ಲೈನ್ ಪೋರ್ಟಲ್ ಮೂಲಕ ಆಕ್ಷೇಪಣೆ ಸಲ್ಲಿಸಬಹುದಾಗಿದೆ.
ಆಕ್ಷೇಪಣೆ ಸಲ್ಲಿಸುವ ವೇಳೆ ಪ್ರಶ್ನೆ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್ (Version Code), ಪ್ರಶ್ನೆ ಸಂಖ್ಯೆ ಹಾಗೂ ಸಂಬಂಧಿತ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಕಡ್ಡಾಯವಾಗಿ ಲಗತ್ತಿಸಬೇಕು.
ಇದನ್ನು ಓದಿ : KAS ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ – 319 ಹುದ್ದೆ ಭರ್ತಿಗೆ KPSC ಅಧಿಸೂಚನೆ

Police Constable Exam – ನಿಗದಿತ ಶುಲ್ಕ ಪಾವತಿಸದಿದ್ದರೆ ಪ್ರಾಧಿಕಾರ ತಿರಸ್ಕಾರ
ಪ್ರತಿ ಆಕ್ಷೇಪಣೆಗೆ ₹25 ಶುಲ್ಕ ಪಾವತಿಸಬೇಕಿದ್ದು, ಈ ಮೊತ್ತವನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವುದಿಲ್ಲ. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದಿದ್ದರೆ, ಅಗತ್ಯ ದಾಖಲೆಗಳನ್ನು ಲಗತ್ತಿಸದಿದ್ದರೆ ಅಥವಾ ನಿಗದಿತ ಶುಲ್ಕ ಪಾವತಿಸದಿದ್ದರೆ ಅಂತಹ ಆಕ್ಷೇಪಣೆಗಳನ್ನು ಪ್ರಾಧಿಕಾರ ತಿರಸ್ಕರಿಸಲಿದೆ.
ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮಗೊಳಿಸುವ ಕೀ ಉತ್ತರಗಳೇ ಅಂತಿಮ
ಅಭ್ಯರ್ಥಿಗಳಿಂದ ಬಂದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿ ಪರಿಶೀಲಿಸಿದ ಬಳಿಕ ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಲಾಗುವುದು. ಸಮಿತಿ ಅಂತಿಮಗೊಳಿಸುವ ಕೀ ಉತ್ತರಗಳೇ ಅಂತಿಮವಾಗಿರಲಿವೆ ಎಂದು KEA ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೀ ಉತ್ತರಕ್ಕೆ ಕ್ಲಿಕ್ ಮಾಡಿ: https://cetonline.karnataka.gov.in/keawebentry456/cpcrpc2026/CPC_RPC_KEY_finalkannada.pdf
ಆಕ್ಷೇಪಣೆ ಸಲ್ಲಿಕೆಗೆ ಕ್ಲಿಕ್ ಮಾಡಿ: https://cetonline.karnataka.gov.in/keAOBJECTIONS/FORMS/Login.aspx




