ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣ – ಉಡುಪಿ-ದಕ್ಷಿಣ ಕನ್ನಡಕ್ಕೆ Red Alert

ರಾಜ್ಯದಲ್ಲಿ ಮುಂಗಾರು ಮಳೆ ತನ್ನ ಅಬ್ಬರವನ್ನು ಮುಂದುವರಿಸಿದ್ದು, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣದೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ.

ಹಗುರದಿಂದ ಸಾಧಾರಣ ಮಳೆ
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ದಿನವಿಡೀ ತಂಪಾದ ವಾತಾವರಣ ಇರಲಿದ್ದು, ಹಲವೆಡೆ ಮಳೆಯಾಗುವ ನಿರೀಕ್ಷೆಯಿದೆ. ರಾತ್ರಿಯ ವೇಳೆಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ತಾಪಮಾನದಲ್ಲೂ ಇಳಿಕೆಯಾಗುವ ಸಾಧ್ಯತೆ ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸುಮಾರು 27 ಡಿಗ್ರಿ ಸೆಲ್ಸಿಯಸ್ನಷ್ಟಿರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆಗೆ ಚಳಿ ಹೆಚ್ಚಾಗುವ ನಿರೀಕ್ಷೆ ಇದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನಗರದಲ್ಲಿ ತಂಪಾದ ವಾತಾವರಣ ನಿರ್ಮಾಣವಾಗಿದೆ.

ಇದನ್ನು ಓದಿ : ರಾಜ್ಯದಲ್ಲಿ 3 ದಿನ ಭಾರೀ ಮಳೆ – ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.

ಈ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ
ಮಲೆನಾಡಿನ ಘಟ್ಟ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಜಾರಿಯಲ್ಲಿದ್ದು, ಗುಡ್ಡ ಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.
ಇದನ್ನು ನೋಡಿ : ನನ್ನ ತಲೇಲಿ ಕೂದಲು ಉದುರಿದ್ಯಂತೆ ಏನ್ಮಾಡೋದು ನಗುತ್ತಲೇ ಹೀಗ್ಯಾಕಂದ್ರುHDK.?




