CM ಭಾಗಿಯಾಗಬೇಕಿದ್ದ ಕಾರ್ಯಕ್ರಮದಲ್ಲಿ ಅವಘಡ : ಕಟೌಟ್ ಕುಸಿದು ಮೂವರಿಗೆ ಗಂಭೀರ ಗಾಯ.!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭಾಗಿಯಾಗಬೇಕಿದ್ದ ಕಾರ್ಯಕ್ರಮದಲ್ಲಿ ಅವಘಡ ಸಂಭವಿಸಿದ್ದು, ವೇದಿಕೆ ಮುಂಭಾಗದಲ್ಲಿ ಅಳವಡಿಸಲಾಗಿದ್ದ ನಾಯಕರ ಕಟೌಟ್ ಕುಸಿದು ಬಿದ್ದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ನಡೆದಿದೆ.
ಕಟೌಟ್ ಕುಸಿದು ಮೂವರಿಗೆ ಗಂಭೀರ ಗಾಯ
ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಈ ದುರ್ಘಟನೆ ಸಂಭವಿಸಿದ್ದು, ವೇದಿಕೆ ಮುಂಭಾಗದಲ್ಲಿ ಹಾಕಿದ್ದ ಕಟೌಟ್ ಅಕಸ್ಮಿಕವಾಗಿ ಕುಸಿದಿದೆ. ಕಟೌಟ್ ಬಿದ್ದ ಪರಿಣಾಮ ಅಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಇದನ್ನು ಓದಿ : Janardhan Reddy ಮನೆಗೆ ಬೆಂಕಿ – 8 ಮಂದಿ ಪೊಲೀಸರ ವಶಕ್ಕೆ

42,345 ಮನೆಗಳು ಲೋಕಾರ್ಪಣೆ
CM ಸಿದ್ದರಾಮಯ್ಯ ಅವರ ವಿಶೇಷ ಅನುದಾನದಲ್ಲಿ ಪೂರ್ಣಗೊಂಡಿರುವ ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿಯಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ರಾಜ್ಯಾದ್ಯಂತ ನಿರ್ಮಿಸಲಾದ ಮನೆಗಳ ಲೋಕಾರ್ಪಣೆ ಕಾರ್ಯಕ್ರಮ ಇಂದು ನಡೆಯಲಿದೆ.
ರಾಜ್ಯದಲ್ಲಿ ನಿರ್ಮಾಣಗೊಂಡಿರುವ ಒಟ್ಟು 1,80,253 ಮನೆಗಳ ಪೈಕಿ ಎರಡನೇ ಹಂತದಲ್ಲಿ ನಿರ್ಮಿತವಾದ 42,345 ಮನೆಗಳನ್ನು ಇಂದು ಲೋಕಾರ್ಪಣೆ ಮಾಡಲು ಯೋಜಿಸಲಾಗಿತ್ತು.
2,866 ಪ್ರದೇಶಗಳನ್ನು ಕೊಳಗೇರಿ ಪ್ರದೇಶಗಳೆಂದು ಘೋಷಣೆ
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವಸತಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ಮಹಾನಗರ, ನಗರ ಹಾಗೂ ಪಟ್ಟಣ ವ್ಯಾಪ್ತಿಯ ಕೊಳಗೇರಿ ಪ್ರದೇಶಗಳನ್ನು ಗುರುತಿಸಿ ಮಂಡಳಿ ಕಾಯ್ದೆಯನ್ವಯ ಘೋಷಣೆ ಹೊರಡಿಸಲಾಗುತ್ತಿದೆ.
ಇದುವರೆಗೆ ಒಟ್ಟು 3,025 ಕೊಳಗೇರಿ ಪ್ರದೇಶಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ 2,866 ಪ್ರದೇಶಗಳನ್ನು ಅಧಿಕೃತವಾಗಿ ಕೊಳಗೇರಿ ಪ್ರದೇಶಗಳೆಂದು ಘೋಷಿಸಲಾಗಿದೆ.

ಅಧಿಕಾರಿಗಳಿಂದ ಪರಿಶೀಲನೆ
ಈ ಪ್ರದೇಶಗಳಲ್ಲಿ ಕೊಳಗೇರಿ ಸುಧಾರಣಾ ಯೋಜನೆಯಡಿ ಮೂಲಭೂತ ಸೌಲಭ್ಯಗಳ ಒದಗಿಕೆ ಹಾಗೂ ವಸತಿ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯವನ್ನು ಮಂಡಳಿ ಕೈಗೊಂಡಿದೆ.
ಇನ್ನು ಘಟನೆ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಕಾರ್ಯಕ್ರಮ ಸ್ಥಳದಲ್ಲಿ ಸುರಕ್ಷತಾ ಕ್ರಮಗಳ ಬಗ್ಗೆ ಪ್ರಶ್ನೆಗಳು ಎದ್ದಿವೆ.
ಇದನ್ನು ನೋಡಿ : ಪ್ರಯಾಣಿಕರೇ ಎಚ್ಚರ : ರೈಲಿನಲ್ಲಿ `ಮದ್ಯ’ ಸಾಗಿಸಿದ್ರೆ 500 ರೂ. ದಂಡ, 6 ತಿಂಗಳು ಜೈಲು ಶಿಕ್ಷೆ ಫಿಕ್ಸ್!




