ರಾಜೀನಾಮೆ ಹಿಂಪಡೆಯಲು CM ಮತ್ತು ಸುರ್ಜೆವಾಲಾ ಮನವಿ ಮಾಡಿದ್ದಾರೆ – ರಾಮಲಿಂಗಾರೆಡ್ಡಿ ಹೇಳಿಕೆ.

ನಿನ್ನೆ ದಿಢೀರನೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾರೆಡ್ಡಿ ಅವರ ನಡೆ ಕಾಂಗ್ರೆಸ್ ಹೈಕಮಾಂಡ್ಗೆ ತಲೆನೋವಾಗಿ ಪರಿಣಮಿಸಿದೆ.
ಸುರ್ಜೆವಾಲಾ ಮನವೊಲಿಕೆ ಸಕ್ಸಸ್?
ಹೌದು.. ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನಗೊಂಡ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾ ರೆಡ್ಡಿ ಇಂದು ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಅವರ ಜೊತೆಗೆ ಸುಮಾರು 25 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ. ಬಳಿಕ ಅವರು ಬೆಂಗಳೂರಿನ ಕೋರಮಂಗಲ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು.
ಇದನ್ನು ಓದಿ : Congress ಗೆ ಶಾಕ್, ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

ರಾಜೀನಾಮೆ ಹಿಂಪಡೆಯಲು CM, ಸುರ್ಜೆವಾಲಾ ಮನವಿ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಿನ್ನೆ ಕಾಂಗ್ರೆಸ್ ನಾಯಕರಿಗೆ ನನ್ನ ಅಭಿಪ್ರಾಯವನ್ನು ತಿಳಿಸಿದ್ದೇನೆ. ರಾಜೀನಾಮೆ ಹಿಂಪಡೆಯುವಂತೆ CM ಡಿ.ಕೆ ಶಿವಕುಮಾರ್ ಹಾಗೂ ಸುರ್ಜೆವಾಲಾ ಮನವಿ ಮಾಡಿದ್ದಾರೆ” ಎಂದು ಹೇಳಿದರು.

ನನಗೆ ಜಲ ಸಂಪನ್ಮೂಲ ಇಲಾಖೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ
“ಜಲ ಸಂಪನ್ಮೂಲ ಇಲಾಖೆಯ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ನಾನು ಆ ಖಾತೆಯನ್ನು ಕೇಳಿರಲಿಲ್ಲ. ಸಚಿವ ಸ್ಥಾನ ಸಿಕ್ಕರೆ ನಿರ್ದಿಷ್ಟ ಖಾತೆಯೇ ಬೇಕು ಎಂದು ನಾನು ಯಾವತ್ತೂ ಬೇಡಿಕೆ ಇಟ್ಟಿಲ್ಲ. ಆದರೆ ಮಾತು ಕೊಟ್ಟಂತೆ ನಡೆದುಕೊಳ್ಳಲಿಲ್ಲ ಎಂಬ ಬೇಸರ ನನ್ನಲ್ಲಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆ ಹಾಗೂ ಖಾತೆ ಹಂಚಿಕೆ ಕುರಿತ ಅಸಮಾಧಾನ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಇದನ್ನು ನೋಡಿ : ಸರ್ಕಾರದ ವಿರುದ್ಧ ಸಿಡಿದೆದ್ದ MUSLIM ಸಮುದಾಯ – ಮುಸ್ಲಿಂ ಸಮುದಾಯಕ್ಕೆ ಸಚಿವ ಸ್ಥಾನ ನೀಡಲು ಆಗ್ರಹ




