
‘ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಬಿಗ್ ಶಾಕ್ ಕೊಟ್ಟ CM : ಸರ್ವೆ ಮುಗಿಯುವವರೆಗೂ ಖಾತೆಗೆ ₹2,000 ಹಣ ಬರಲ್ಲ!
ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷ ಪೂರ್ಣಗೊಳ್ಳುತ್ತಿರುವ ಬೆನ್ನಲ್ಲೇ, ಫಲಾನುಭವಿಗಳ ಅರ್ಹತೆಯನ್ನು ಮತ್ತೊಮ್ಮೆ ಪರಿಶೀಲಿಸಲು ಸರ್ಕಾರ ಮುಂದಾಗಿದೆ. ಅರ್ಹ ಫಲಾನುಭವಿಗಳನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಹೊಸ ಮಾರ್ಗಸೂಚಿ ಬಿಡುಗಡೆಗೆ ಸಿದ್ಧತೆ ನಡೆದಿದೆ.
ಮನೆ ಮನೆ ಸಮೀಕ್ಷೆ
ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರು ಇಂದು ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆಗೆ ಸಂಬಂಧಿಸಿದ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಮಾರ್ಗಸೂಚಿ ಬಿಡುಗಡೆಯಾದ ಬಳಿಕ ಮೂರು ದಿನಗಳೊಳಗೆ ಮನೆ ಮನೆ ಸಮೀಕ್ಷೆ ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.

ಅನರ್ಹ ಫಲಾನುಭವಿಗಳಿಗೆ ಕಡಿವಾಣ
ಮರುಪರಿಶೀಲನಾ ಸಮೀಕ್ಷೆಯಲ್ಲಿ ಫಲಾನುಭವಿಗಳ ಅರ್ಹತೆಯನ್ನು ಪರಿಶೀಲಿಸಲಾಗುತ್ತದೆ. ಈ ವೇಳೆ ಯೋಜನೆಯ ನಿಯಮಗಳಿಗೆ ಅನರ್ಹರಾಗಿರುವವರನ್ನು ಗುರುತಿಸಿ ಫಲಾನುಭವಿಗಳ ಪಟ್ಟಿಯಿಂದ ಕೈಬಿಡುವ ಪ್ರಕ್ರಿಯೆ ನಡೆಯಲಿದೆ. ಸಮೀಕ್ಷೆ ಪೂರ್ಣಗೊಂಡು ಅನರ್ಹ ಫಲಾನುಭವಿಗಳನ್ನು ಗುರುತಿಸಿದ ಬಳಿಕವೇ ಗೃಹಲಕ್ಷ್ಮಿ ಯೋಜನೆಯ ಹಣದ ಪಾವತಿ ಮುಂದುವರಿಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದರಿಂದ ಮರುಪರಿಶೀಲನಾ ಪ್ರಕ್ರಿಯೆ ನಡೆಯುವ ಅವಧಿಯಲ್ಲಿ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುವುದರಲ್ಲಿ ವಿಳಂಬವಾಗುವ ಸಾಧ್ಯತೆ ಇದೆ ಎಂಬ ಚರ್ಚೆ ಆರಂಭವಾಗಿದೆ.
ಆದರೆ, ಹಣ ಪಾವತಿಯನ್ನು ಸಂಪೂರ್ಣವಾಗಿ ಸ್ಥಗಿತ ಗೊಳಿಸಲಾಗುತ್ತದೆಯೇ ಎಂಬುದರ ಕುರಿತು ಸರ್ಕಾರದಿಂದ ಅಧಿಕೃತ ಸ್ಪಷ್ಟನೆ ಇನ್ನಷ್ಟೇ ಬರಬೇಕಿದೆ.
READ THIS: ನಿಮ್ಮ ಊರಿನಲ್ಲೇ 2000 ಗೃಹಲಕ್ಷ್ಮಿ ಹಣಕ್ಕೆ ಹೊಸ ಅರ್ಜಿ ಸಲ್ಲಿಸಬಹುದು!

ಒಂದು ತಿಂಗಳಲ್ಲಿ ಸಮೀಕ್ಷೆ ಪೂರ್ಣಗೊಳಿಸುವ ಗುರಿ
ಸರ್ಕಾರವು ರಾಜ್ಯಾದ್ಯಂತ ಮರುಪರಿಶೀಲನಾ ಸಮೀಕ್ಷೆಯನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸುವ ಗುರಿ ಹೊಂದಿದೆ ಎನ್ನಲಾಗಿದೆ. ಆದರೆ, ಮನೆ ಮನೆಗೆ ತೆರಳಿ ಫಲಾನುಭವಿಗಳ ದಾಖಲೆ ಹಾಗೂ ಅರ್ಹತೆಯನ್ನು ಪರಿಶೀಲಿಸಬೇಕಿರುವುದರಿಂದ ನಿಗದಿತ ಅವಧಿಯಲ್ಲಿ ಸಮೀಕ್ಷೆ ಪೂರ್ಣಗೊಳಿಸುವುದು ಅಧಿಕಾರಿಗಳಿಗೆ ಸವಾಲಾಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.
ಮರುಪರಿಶೀಲನೆಯ ಪ್ರಮುಖ ಉದ್ದೇಶ ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಸೌಲಭ್ಯವನ್ನು ಮುಂದುವರಿಸುವುದು ಹಾಗೂ ಅನರ್ಹರಿಗೆ ಪಾವತಿಯಾಗುತ್ತಿರುವ ಹಣಕ್ಕೆ ಕಡಿವಾಣ ಹಾಕುವುದಾಗಿದೆ.

ಸರ್ಕಾರದ ಅಧಿಕೃತ ಮಾರ್ಗಸೂಚಿ ಬಿಡುಗಡೆ
ಹೀಗಾಗಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ತಮ್ಮ ಅಗತ್ಯ ದಾಖಲೆಗಳು ಹಾಗೂ ಸಂಬಂಧಿತ ಮಾಹಿತಿಯನ್ನು ಸಿದ್ಧವಾಗಿಟ್ಟುಕೊಳ್ಳುವುದು ಒಳಿತು.
ಸರ್ಕಾರದ ಅಧಿಕೃತ ಮಾರ್ಗಸೂಚಿ ಬಿಡುಗಡೆಯಾದ ಬಳಿಕ ಮರುಪರಿಶೀಲನೆಯ ಸಂಪೂರ್ಣ ನಿಯಮಗಳು, ಸಮೀಕ್ಷೆಯ ವಿಧಾನ, ಅಗತ್ಯ ದಾಖಲೆಗಳು ಹಾಗೂ ಹಣ ಪಾವತಿ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ.
MUST WATCH : ಮಾಧ್ಯಮದವರ ಪ್ರಶ್ನೆಗೆ ಸಿದ್ದು ಸೈಲೆಂಟ್ ನೋ ಕಾಮೆಂಟ್ಸ್ ಎಂದಿದ್ದೇಕೆ ಮಾಜಿ ಸಿಎಂ




