CM DK ಶಿವಕುಮಾರ್ ಗೆ ಸಂಪುಟ ಸಂಕಷ್ಟ.!

ಕರ್ನಾಟಕ ಕಾಂಗ್ರೆಸ್ನಲ್ಲಿ ಸಂಪುಟ ವಿಸ್ತರಣೆ ಬಳಿಕ ಇದೀಗ ಖಾತೆ ಹಂಚಿಕೆ ವಿಚಾರ ಕಗ್ಗಂಟಾಗಿದೆ. ಸಚಿವ ಸಂಪುಟಕ್ಕೆ ಹೊಸ ಮುಖಗಳಿಗೆ ಅವಕಾಶ ನೀಡಿದ ಬೆನ್ನಲ್ಲೇ ಖಾತೆ ಹಂಚಿಕೆ ಬಗ್ಗೆ ಹಲವು ಲೆಕ್ಕಾಚಾರಗಳು ನಡೆಯುತ್ತಿವೆ.
ಸಂಪುಟ ವಿಸ್ತರಣೆ ಬಳಿಕ CM DK ಶಿವಕುಮಾರ್ಗೆ ಖಾತೆ ಹಂಚಿಕೆ ಕಗ್ಗಂಟು
ಕರ್ನಾಟಕದಲ್ಲಿ ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಹಂಚಿಕೆ ಕಗ್ಗಂಟಾಗಿದೆ. ಹೊಸ ಸಚಿವರಿಗೆ ಖಾತೆ ಹಂಚಿಕೆ ಮಾಡೋದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಸಚಿವ ಸ್ಥಾನ ಸಿಕ್ಕರೂ, ತಮಗೆ ಬೇಕಾದ ಖಾತೆ ಸಿಗಬೇಕು ಅನ್ನೋ ಲೆಕ್ಕಾಚಾರದಲ್ಲಿ ಹಲವು ಸಚಿವರು ಲಾಬಿ ನಡೆಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಾಳೆ ದೆಹಲಿಗೆ ತೆರಳಲಿದ್ದು, ತಾತ್ಕಾಲಿಕ ಖಾತೆ ಹಂಚಿಕೆ ಪಟ್ಟಿಯೊಂದಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಮೊದಲು ತಾತ್ಕಾಲಿಕ ಪಟ್ಟಿ ಸಿದ್ಧಪಡಿಸಿ, ಹೈಕಮಾಂಡ್ ಜೊತೆ ಚರ್ಚಿಸಿದ ಬಳಿಕ ಅಂತಿಮ ಖಾತೆ ಹಂಚಿಕೆ ಮಾಡುವ ಲೆಕ್ಕಾಚಾರ ನಡೆದಿದೆ.
ಇದನ್ನೂ ಓದಿ: ವಿಧಾನ ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ

ಇನ್ನು ಸಂಪುಟ ವಿಸ್ತರಣೆಯ ಬಳಿಕ ಸಚಿವ ಸ್ಥಾನ ಹಾಗೂ ಖಾತೆ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ಒಳಗೆ ಅಸಮಾಧಾನವೂ ಕಾಣಿಸಿಕೊಂಡಿದೆ. ಹೀಗಾಗಿ ಖಾತೆ ಹಂಚಿಕೆ ವಿಚಾರದಲ್ಲಿ ಪ್ರಾದೇಶಿಕ ಸಮತೋಲನ, ಹಿರಿಯ-ಕಿರಿಯರ ಲೆಕ್ಕಾಚಾರ ಪ್ರಮುಖವಾಗಲಿದೆ.
ಇನ್ನು ಖಾತೆ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸುವ ಸಾಧ್ಯತೆ ಇದೆ. ಯಾರಿಗೆ ಯಾವ ಖಾತೆ ಅನ್ನೋದು ಇದೀಗ ರಾಜ್ಯ ಕಾಂಗ್ರೆಸ್ನಲ್ಲಿ ಕುತೂಹಲ ಮೂಡಿಸಿದ್ದು, ಹೈಕಮಾಂಡ್ ಭೇಟಿ ಬಳಿಕ ಖಾತೆ ಹಂಚಿಕೆ ಗೊಂದಲಕ್ಕೆ ತೆರೆ ಬೀಳುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.
MUST WATCH: ಪೇಮೆಂಟ್ ಕೊಟ್ಟು ಮಂತ್ರಿಯಾಗೋ ಸಂಸ್ಕೃತಿ ನಮ್ಮದಲ್ಲ ಅದು BJPಯದ್ದು ಎಂದ ZAMEER




