ರಾಜ್ಯದ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಿ CM ಆದೇಶ!

ಮುಖ್ಯಮಂತ್ರಿ (CM) ಡಿಕೆ ಶಿವಕುಮಾರ್ ಸಂಪುಟದ ಪ್ರಮುಖ ಸಚಿವರಿಗೆ ವಿವಿಧ ಜಿಲ್ಲೆಗಳ ಉಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಮಳೆಗಾಲದ ತುರ್ತು ಪರಿಸ್ಥಿತಿ ಮತ್ತು ಪ್ರವಾಹ ನಿರ್ವಹಣೆಗಾಗಿ ತಾತ್ಕಾಲಿಕ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ.

ಯಾರಿಗೆ ಯಾವ ಜಿಲ್ಲೆಯ ಜವಾಬ್ದಾರಿ?
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಜಿಲ್ಲೆಗಳ ಜವಾಬ್ದಾರಿಯನ್ನು ಹಿರಿಯ ನಾಯಕರಿಗೆ ಹಂಚಿಕೆ ಮಾಡಲಾಗಿದ್ದು, ಡಿಸಿಎಂ ಡಾ. ಜಿ. ಪರಮೇಶ್ವರ, ರಾಮಲಿಂಗಾರೆಡ್ಡಿ, ಎಂ.ಬಿ. ಪಾಟೀಲ್ ಹಾಗೂ ಯುವ ನಾಯಕರಾದ ಯತೀಂದ್ರ ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆ ಅವರಿಗೆ ಪ್ರಮುಖ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.
ಇದನ್ನು ಓದಿ : CM ಆದ್ಮೇಲೂ ಬ್ಲೂಫಿಲ್ಮ್, ಪೋಸ್ಟರ್ ರಾಜಕೀಯ ಬಿಡಲಿಲ್ಲ’ – DK Shivakumar ವಿರುದ್ಧ HDK ವಾಗ್ದಾಳಿ

ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಲುವಾಗಿ CM ನೇಮಕ
ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು,ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಮತ್ತು ಪರಿಹಾರ ಕಾಮಗಾರಿಗಳ ಉಸ್ತುವಾರಿ ವಹಿಸಲು ಮುಖ್ಯಮಂತ್ರಿಗಳು ಸಚಿವರಿಗೆ ವಿವಿಧ ಜಿಲ್ಲೆಗಳ ತುರ್ತು ಪ್ರಕೃತಿ ವಿಕೋಪ ಮೇಲುಸ್ತುವಾರಿಜವಾಬ್ದಾರಿಯನ್ನು ಹಂಚಿಕೆ ಮಾಡಿ ಆದೇಶಿಸಿದ್ದಾರೆ. ಪೂರ್ಣ ಪ್ರಮಾಣದ ಜಿಲ್ಲಾ ಉಸ್ತುವಾರಿ ಸಚಿವರ ಅಧಿಕೃತ ಪಟ್ಟಿ ಸದ್ಯದಲ್ಲೇ ಹೊರಬೀಳಲಿದೆ ಎಂದು ಹೇಳಲಾಗಿದೆ.

ಇದನ್ನು ನೋಡಿ : ತುಮಕೂರಿನಲ್ಲಿ WHITE TOPPING ಕಾಮಗಾರಿ ಸ್ಥಗಿತ- ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ




