ಅಭಿವೃದ್ಧಿ ಕಾಮಗಾರಿಗಳ ಪರಿವೀಕ್ಷಣೆ ನಡೆಸಿದ CM ಸಿದ್ದರಾಮಯ್ಯ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿನಲ್ಲಿ ನಗರ ಪ್ರದಕ್ಷಿಣೆ ನಡೆಸಿ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಗತಿಯಲ್ಲಿರುವ ಅಭಿವೃದ್ದಿ ಕಾಮಗಾರಿಗಳ ಪರಿವೀಕ್ಷಣೆ ನಡೆಸಿದರು. ಬಳಿಕ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಿದರು.

ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಾಮಗಾರಿ ನಡೆಸಬೇಕು
ನಗರದ ಕೆಎಸ್ಐಸಿ ಸಮೀಪದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ನಡೆಯುತ್ತಿರುವ ಯು.ಜಿ. ಕೇಬಲಿಂಗ್ ಕಾಮಗಾರಿ, ಮಾನಂದವಾಡಿ ರಸ್ತೆಯ ಎನ್.ಐ ಕಾಲೇಜು ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿ ಸೇರಿದಂತೆ ಬನ್ನಿಮಂಟಪದ ಸಮೀಪ ನಿರ್ಮಾಣವಾಗುತ್ತಿರುವ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಕಾಮಗಾರಿ ವೀಕ್ಷಿಸಿ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಅಧಿಕಾರಿಗಳಿಗೆ CM ಸೂಚಿಸಿದರು.
READ THIS : ರೇಣುಕಾಸ್ವಾಮಿ ಕೊಲೆ ಪ್ರಕರಣ – ನಾಳೆ ನಟ ದರ್ಶನ್ಗೆ ಬಿಗ್ ಡೇ

ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚನೆ – CM
ಇನ್ನು ಮೈಸೂರಿನಲ್ಲಿ ನಡೆಯುತ್ತಿರುವ ಪ್ರಮುಖ ಅಭಿವೃದ್ಧಿ ಯೋಜನೆಗಳ ಪ್ರಗತಿಯನ್ನು ಮುಖ್ಯಮಂತ್ರಿ ಸ್ವತಃ ಪರಿಶೀಲಿಸಿದ್ದು, ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಿದ್ರು. ಈ ವೇಳೆ ಸಚಿವ ಹೆಚ್.ಸಿ ಮಹದೇವಪ್ಪ, ತನ್ವೀರ್ ಸೇಠ್, ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವರು ಹಾಜರಿದ್ದರು.

MUST WATCH : ಬೆಂಗಳೂರಿಗರಿಗೆ ಭರ್ಜರಿ GOOD NEWS ಕೊಟ್ಟ DKS -ಈ BUMPER OFFER ಅನ್ನು ಮಿಸ್ ಮಾಡಿಕೊಳ್ಳಬೇಡಿ




