ಆ ದಿನ ಕರ್ನಾಟಕಕ್ಕೆ ಬರ್ತಿದ್ದಾರೆ ತಮಿಳುನಾಡು CM ವಿಜಯ್! ಕಾರಣವೇನು?

ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಇದೇ ಜೂನ್ 12ರಂದು ಮೊದಲ ಬಾರಿಗೆ ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆಯಲಿದ್ದಾರೆ. ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೊಲ್ಲೂರಿಗೆ ಆಗಮಿಸಲಿರುವ CM ವಿಜಯ್, ವಿಶೇಷ ಪೂಜೆ ಸಲ್ಲಿಸಿ ದೇವಿಯ ಆಶೀರ್ವಾದ ಪಡೆಯಲಿದ್ದಾರೆ. ಬಳಿಕ ಸಂಜೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಚೆನ್ನೈಗೆ ಪ್ರಯಾಣ ಬೆಳೆಸಲಿದ್ದಾರೆ.

ರಾಜಕೀಯ ನಾಯಕರ ಪಾಲಿಗೆ ಭಕ್ತಿ ಶ್ರದ್ಧೆಯ ಕೇಂದ್ರ ಕೊಲ್ಲೂರು
ಕೊಲ್ಲೂರು ಮೂಕಾಂಬಿಕೆ ಕ್ಷೇತ್ರವು ಕರ್ನಾಟಕ ಮಾತ್ರವಲ್ಲದೆ ತಮಿಳುನಾಡಿನ ರಾಜಕೀಯ ನಾಯಕರು ಹಾಗೂ ಸಿನಿಮಾ ಗಣ್ಯರಿಗೂ ಅಪಾರ ಭಕ್ತಿ ಮತ್ತು ನಂಬಿಕೆಯ ದೇವಾಲಯಗಿದೆ. ಹಲವು ಪ್ರಮುಖ ನಾಯಕರು ಸಂಕಷ್ಟದ ಸಮಯದಲ್ಲಿ ಹಾಗೂ ಅಧಿಕಾರಕ್ಕೆ ಬಂದ ಬಳಿಕ ಈ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿರುವ ಉದಾಹರಣೆಗಳಿವೆ.
ಇದನ್ನು ಓದಿ : ತಮಿಳು ಸಿನಿಮಾಗಳು ದಿನಕ್ಕೆ 5 ಶೋ ಪ್ರದರ್ಶನಕ್ಕೆ ಸಿಎಂ ಅನುಮತಿ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಜಿ. ರಾಮಚಂದ್ರನ್ ಅವರು ಮುಖ್ಯಮಂತ್ರಿಯಾಗಿದ್ದಾಗ ಮೂಕಾಂಬಿಕೆ ದೇವಿಗೆ ಚಿನ್ನದ ಖಡ್ಗವನ್ನು ಕಾಣಿಕೆಯಾಗಿ ಸಮರ್ಪಿಸಿದ್ದರು.
ಮಾಜಿ ಮುಖ್ಯಮಂತ್ರಿ ಜಯಲಲಿತಾ ಕೂಡ ರಾಜಕೀಯ ಸವಾಲುಗಳ ನಡುವೆ ಇಲ್ಲಿಗೆ ಆಗಮಿಸಿ ವಿಶೇಷ ಚಂಡಿಕಾ ಯಾಗ ನೆರವೇರಿಸಿದ್ದರು.
ರಾಜಕೀಯ ಕ್ಷೇತ್ರದ ಗಣ್ಯರ ಆರಾಧ್ಯ ಕ್ಷೇತ್ರ
ಖ್ಯಾತ ಸಂಗೀತ ನಿರ್ದೇಶಕ ಇಳೆಯರಾಜ ಸೇರಿದಂತೆ ಅನೇಕ ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ಗಣ್ಯರ ಪಾಲಿಗೂ ಮೂಕಾಂಬಿಕೆ ದೇವಸ್ಥಾನ ಆರಾಧ್ಯ ಕ್ಷೇತ್ರವಾಗಿದೆ. ಇದೀಗ ಮುಖ್ಯಮಂತ್ರಿ ವಿಜಯ್ ಕೂಡ ದೇವಿಯ ದರ್ಶನ ಪಡೆಯುವ ಮೂಲಕ ಭಕ್ತಿಭಾವ ವ್ಯಕ್ತಪಡಿಸುತ್ತಿದ್ದಾರೆ.

ಕೊಲ್ಲೂರು ಮೂಕಾಂಬಿಕೆಯ ಮಹಿಮೆ
ಉಡುಪಿ ಜಿಲ್ಲೆಯಲ್ಲಿರುವ ಕೊಲ್ಲೂರು ಕ್ಷೇತ್ರವು ಪರಶುರಾಮ ಸೃಷ್ಟಿಯ ಏಳು ಮುಕ್ತಿ ಕ್ಷೇತ್ರಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ.
ಆದಿ ಶಂಕರಾಚಾರ್ಯರು ಪ್ರತಿಷ್ಠಾಪಿಸಿದ ಈ ಶಕ್ತಿಪೀಠದಲ್ಲಿ ಮಹಾಕಾಳಿ, ಮಹಾಲಕ್ಷ್ಮಿ ಹಾಗೂ ಮಹಾಸರಸ್ವತಿ ದೇವಿಯರ ಐಕ್ಯ ರೂಪವಾಗಿ ಮೂಕಾಂಬಿಕೆಯನ್ನು ಆರಾಧಿಸಲಾಗುತ್ತದೆ.
ಇದನ್ನು ನೋಡಿ : ಕಾರು – ಸ್ಕೂಟಿ ನಡುವೆ ಡೆಡ್ಲಿ ಆಕ್ಸಿಡೆಂ* – BILL COLLECTORಗೆ ಗಂಭೀರ ಗಾಯ




