ಅರ್ಜಿ ವಾಪಸ್ ಪಡೆದ ಸಂಗೀತ – CM ವಿಜಯ್ ವಿಚ್ಛೇದನ ಪ್ರಕರಣ ಇತ್ಯರ್ಥ

ತಮಿಳುನಾಡು ಮುಖ್ಯಮಂತ್ರಿ (CM) ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಸಿ. ಜೋಸೆಫ್ ವಿಜಯ್ ಅವರ ವಿರುದ್ಧ ದಾಖಲಿಸಲಾಗಿದ್ದ ವಿಚ್ಛೇದನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತ್ನಿ ಸಂಗೀತ ಅವರು ಚೆಂಗಲ್ಪಟ್ಟು ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.
ವಿಚ್ಛೇದನಕ್ಕೆ ಕಾರಣವೇನು?
ಈ ವರ್ಷದ ಫೆಬ್ರವರಿಯಲ್ಲಿ ಸಂಗೀತ ಅವರು ದಾಂಪತ್ಯ ಜೀವನವನ್ನು ಅಂತ್ಯಗೊಳಿಸುವಂತೆ ಕೋರಿ ಚೆಂಗಲ್ಪಟ್ಟು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪರಸ್ಪರ ಹೊಂದಾಣಿಕೆಯಾಗದ ಭಿನ್ನಾಭಿಪ್ರಾಯಗಳೇ ವಿಚ್ಛೇದನಕ್ಕೆ ಕಾರಣ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಜೊತೆಗೆ ಜೀವನಾಂಶ ನೀಡುವಂತೆ ಹಾಗೂ ಚೆನ್ನೈನ ನೀಲಂಕರೈನಲ್ಲಿರುವ ದಂಪತಿಯ ಜಂಟಿ ನಿವಾಸದಲ್ಲಿ ವಾಸಿಸಲು ಅನುಮತಿ ನೀಡುವಂತೆಯೂ ಮನವಿ ಮಾಡಿದ್ದರು.
ಇದನ್ನು ಓದಿ : ಡಿವೋರ್ಸ್ ವಿವಾದ ನಡುವೆ ಮ್ಯಾಚಿಂಗ್ ಡ್ರೆಸ್ನಲ್ಲಿ ಮಿಂಚಿದ Vijay – Trisha

ವಿಚಾರಣೆ ಹಲವು ಬಾರಿ ಮುಂದೂಡಿಕೆಯಾಗಿತ್ತು
ವಿಜಯ್ ಮತ್ತು ಸಂಗೀತ ನಡುವಿನ ದಾಂಪತ್ಯ ವಿವಾದದ ವಿಚಾರಣೆ ಈ ವರ್ಷ ಹಲವು ಬಾರಿ ಮುಂದೂಡಿಕೆಯಾಗಿತ್ತು. ಕಳೆದ ತಿಂಗಳು ನಡೆದ ವಿಚಾರಣೆ ವೇಳೆ ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಆಗಸ್ಟ್ 7ಕ್ಕೆ ಮುಂದೂಡಿದ್ದರು.
ಅಡಚಣೆಗಳ ಕುರಿತು ನ್ಯಾಯಾಲಯಕ್ಕೆ ಮಾಹಿತಿ
ಹಿಂದಿನ ಎಲ್ಲ ವಿಚಾರಣೆಗಳಲ್ಲಿಯೂ ವಿಜಯ್ ಅಥವಾ ಸಂಗೀತ ವೈಯಕ್ತಿಕವಾಗಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಅವರ ಪರ ವಕೀಲರು ಮಾತ್ರ ಹಾಜರಾಗಿ, ವೈಯಕ್ತಿಕ ಹಾಜರಾತಿಗೆ ಇರುವ ಅಡಚಣೆಗಳ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡುತ್ತಿದ್ದರು.

ಇದೀಗ ಪತ್ನಿ ಸಂಗೀತ ಅವರೇ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ವಾಪಸ್ ಪಡೆದುಕೊಂಡಿರುವುದರಿಂದ ಈ ಕಾನೂನು ಹೋರಾಟಕ್ಕೆ ತೆರೆ ಬಿದ್ದಂತಾಗಿದೆ.
ಇದನ್ನು ನೋಡಿ : CONGRESS HIGH-COMMANDಗೆ ನೈತಿಕತೆನೇ ಇಲ್ಲ-NAGENDRAಗೆ ಸಚಿವ ಸ್ಥಾನ ಕೊಟ್ಟಿದ್ದಕ್ಕೆ ಆಕ್ರೋಶ





