Accident : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಒಂದೇ ಕುಟುಂಬದ ಮೂವರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿಯ ಕೆಂಕೆರೆ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ.
ಮೂವರು ಸ್ಥಳದಲ್ಲೇ ದಾರುಣ ಸಾವು
ಓಮಿನಿ ಕಾರಿಗೆ ಎದುರಿಗೆ ಬಂದ ಮತ್ತೊಂದು ಕಾರು ಏಕಾಏಕಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ರಸ್ತೆ ಪಕ್ಕಕ್ಕೆ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ರೆ ಮೂವರಿಗೆ ಗಾಯಗಳಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಾಸಿ ಚಿಕಿತ್ಸೆ ಕೊಡಿಸಲಾಗಿದೆ.
ಇದನ್ನು ಓದಿ : ತುಮಕೂರಲ್ಲಿ ಬೈಕ್ ಹಾಗೂ ಕಾರಿನ ನಡುವೆ Accident – ಸವಾರ ಬಚಾವ್

ಇಬ್ಬರು ಮಕ್ಕಳು ಸೇರಿ ಮೂವರಿಗೆ ಗಂಭೀರ ಗಾಯ
ಆಂಧ್ರಪ್ರದೇಶದ ಮೂಲದ ಕುಟುಂಬಸ್ಥರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಮಾರ್ಗವಾಗಿ ಹುಳಿಯಾರು ಕಡೆಗೆ ಬರ್ತಿದ್ದ ವೇಳೆ ಕಾರುಗಳ ನಡುವೆ ಭೀಕರ Accident ಸಂಭವಿಸಿದೆ. ಕಾರಿನಲ್ಲಿ ಇದ್ದ ತಂದೆ,ತಾಯಿ, ಹೆಂಡತಿ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಇಬ್ಬರು ಮಕ್ಕಳು ಸೇರಿ ಮೂವರಿಗೆ ಗಂಭೀರ ಗಾಯಗಳಾಗಿದೆ.
Accident – ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಘಟನಾ ಸ್ಥಳಕ್ಕೆ ಹುಳಿಯಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರ ನೆರವಿನಿಂದ ಕಾರನ್ನು ಮೇಲೆತ್ತಿ, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಅಪಘಾತ ಸಂಬಂಧ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಿದ್ದಾರೆ.

ಇದನ್ನು ನೋಡಿ : ಮಳೆಗೆ ಕೆಸರುಗದ್ದೆಯಂತಾದ ರಸ್ತೆಗಳು ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ




