ಸಚಿವ ಸಂಪುಟ ಫೈನಲ್, ಗುರುವಾರವೇ 18 ಸಚಿವರ ಪ್ರಮಾಣವಚನ? CM ಡಿಕೆಶಿ ಸಂಪುಟ ಸೇರೋದು ಯಾರ್ಯಾರು?

ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ನೂತನ ಸಚಿವರ ಅಂತಿಮ ಪಟ್ಟಿ ಸಿದ್ಧಗೊಂಡಿದೆ ಎನ್ನಲಾಗಿದೆ. ಇದೀಗ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಂತಿಮ ಅನುಮೋದನೆ ಮಾತ್ರ ಬಾಕಿಯಿದೆ.
ಸಚಿವ ಸ್ಥಾನಕ್ಕೆ ಆಕಾಂಕ್ಷಿಗಳ ಹೆಸರಿನ ಕುರಿತು ಸುದೀರ್ಘ ಚರ್ಚೆ
ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ನಿವಾಸದಲ್ಲಿ ನಡೆದ ಮಹತ್ವದ ಸಭೆಯಲ್ಲಿ CM ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭಾಗವಹಿಸಿ ಸಚಿವ ಸ್ಥಾನಕ್ಕೆ ಆಕಾಂಕ್ಷಿಗಳ ಹೆಸರಿನ ಕುರಿತು ಸುದೀರ್ಘ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಅಂತಿಮಗೊಳಿಸಿದ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ಗೆ ಕಳುಹಿಸಿ ಒಪ್ಪಿಗೆ ಪಡೆಯಲು ನಿರ್ಧರಿಸಲಾಗಿದೆ.
ಕೆಲಸ ಮಾಡಿದ ನಾಯಕರಿಗೆ ಹೆಚ್ಚಿನ ಆದ್ಯತೆ
ಈ ಬಾರಿ ಸಂಪುಟ ವಿಸ್ತರಣೆಯಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ ನಾಯಕರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎನ್ನಲಾಗಿದೆ. ಜೊತೆಗೆ, ಹಿಂದಿನ ಆಡಳಿತಾವಧಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸದ ಕೆಲ ಸಚಿವರಿಗೆ ಅವಕಾಶ ನೀಡದಿರುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಗಂಭೀರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಸಾಮರ್ಥ್ಯ, ಕಾರ್ಯಕ್ಷಮತೆ ಮತ್ತು ಜನಪ್ರಿಯತೆಯ ಆಧಾರದ ಮೇಲೆ ಹೊಸ ಮುಖಗಳಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸುವ ಸಾಧ್ಯತೆ ಇದೆ.
ಇದನ್ನು ಓದಿ : ಸಂಪುಟ ವಿಸ್ತರಣೆಗೆ ಕಸರತ್ತು – ಇಂದು ಹೈಕಮಾಂಡ್ ಜೊತೆ ಸಿಎಂ ಡಿಕೆಶಿ ಸಭೆ

ಜು. 30ಕ್ಕೆ ಪ್ರಮಾಣವಚನ ಸ್ವೀಕಾರ ಸಾಧ್ಯತೆ
ಎಲ್ಲವೂ ಯೋಜನೆಯಂತೆ ನಡೆದರೆ, ನೂತನ ಸಚಿವರ ಪ್ರಮಾಣವಚನ ಸಮಾರಂಭವು ಜುಲೈ 30ರಂದು ನಡೆಯುವ ಸಾಧ್ಯತೆ ಇದೆ. ಹೈಕಮಾಂಡ್ನಿಂದ ಅಂತಿಮ ಅನುಮೋದನೆ ದೊರೆತ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ಮರಳಲಿದ್ದು, ರಾಜಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಿದ್ಧತೆಗಳು ಆರಂಭವಾಗಲಿವೆ.
ಸಚಿವ ಸ್ಥಾನದ ರೇಸ್ ನಲ್ಲಿರುವವರು ಇವರೇ ನೋಡಿ!
- ಲಕ್ಷ್ಮಣ ಸವದಿ (ಅಥಣಿ)
- ಎಚ್.ಸಿ. ಬಾಲಕೃಷ್ಣ (ಮಾಗಡಿ)
- ಶರತ್ ಬಚ್ಚೇಗೌಡ (ಹೊಸಕೋಟೆ)
- ಕೆ.ಎಂ. ಶಿವಲಿಂಗೇಗೌಡ (ಅರಸೀಕೆರೆ)
- ಬಿ. ಶಿವಣ್ಣ (ಆನೇಕಲ್)
- ಎಂ. ಕೃಷ್ಣಪ್ಪ (ವಿಜಯನಗರ)
- ಯಶವಂತರಾಯ ಗೌಡ ಪಾಟೀಲ್ (ಇಂಡಿ)
- ಅಪ್ಪಾಜಿ ನಾಡಗೌಡ (ಮುದ್ದೇಬಿಹಾಳ)
- ಅಜಯ್ ಸಿಂಗ್ (ಜೇವರ್ಗಿ)
- ಸಲೀಂ ಅಹ್ಮದ್ (ವಿಧಾನ ಪರಿಷತ್)
- ಎಸ್.ಎಸ್. ಮಲ್ಲಿಕಾರ್ಜುನ (ದಾವಣಗೆರೆ ಉತ್ತರ)
- ಮಧು ಬಂಗಾರಪ್ಪ (ಸೊರಬ)
- ಚೆಲುವರಾಯಸ್ವಾಮಿ (ನಾಗಮಂಗಲ)
- ಬಿ. ನಾಗೇಂದ್ರ (ಬಳ್ಳಾರಿ ಗ್ರಾಮಾಂತರ)
- ಆರತಿ ಕೃಷ್ಣ (ವಿಧಾನ ಪರಿಷತ್)
- ಲಕ್ಷ್ಮೀ ಹೆಬ್ಬಾಳ್ಕರ್ (ಬೆಳಗಾವಿ ಗ್ರಾಮಾಂತರ)
- ಪುಟ್ಟರಂಗ ಶೆಟ್ಟಿ (ಚಾಮರಾಜನಗರ)
- ತನ್ವೀರ್ ಸೇಠ್ (ನರಸಿಂಹರಾಜ)
- ರಿಜ್ವಾನ್ ಅರ್ಷದ್ (ಶಿವಾಜಿನಗರ)
- ಎನ್.ಎ. ಹ್ಯಾರಿಸ್ (ಶಾಂತಿನಗರ)
- ಜಮೀರ್ ಅಹ್ಮದ್ ಖಾನ್ (ಚಾಮರಾಜಪೇಟೆ)
- ಟಿ. ರಘುಮೂರ್ತಿ (ಚಳ್ಳಕೆರೆ)
- ಎ.ಎಸ್. ಪೊನ್ನಣ್ಣ (ವಿರಾಜಪೇಟೆ)
- ಉಮಾಶ್ರೀ (ವಿಧಾನ ಪರಿಷತ್)

ಇದನ್ನು ನೋಡಿ : ಶಾಸಕ VEERENDRA PUPPYಗೆ ಮಂತ್ರಿ ಸ್ಥಾನ ಕೊಡಲಿ -ಚಿತ್ರದುರ್ಗದಲ್ಲಿ ಅಭಿಮಾನಿಗಳಿಂದ ಪ್ರಾರ್ಥನೆ




