Delhi ಯಲ್ಲಿ ವರಿಷ್ಠರ ಜೊತೆಗೆ ಡಿಕೆ ಶಿವಕುಮಾರ್ ಮಹತ್ವದ ಸಭೆ

ದೆಹಲಿಯಲ್ಲಿ ಸಂಪುಟ ವಿಸ್ತರಣೆ ಸರ್ಕಸ್ ತೀವ್ರಗೊಂಡಿದ್ದು, ಈ ಸಂಬಂಧ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ರಾಜ್ಯ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ Delhi ಯಲ್ಲಿ ಮಹತ್ವದ ಸಭೆ
ಲೋಕಸಭೆ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿಯವರ ಜೊತೆ ಇಂದು ಮಹತ್ವದ ಸಭೆ ನಡೆದಿದ್ದು,, ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭಾಗಿಯಾಗಿದ್ದರು.
ಇದನ್ನೂ ಓದಿ: ಇಂದು ರಾತ್ರಿ ದೆಹಲಿಗೆ ತೆರಳಲಿರುವ ಸಿಎಂ ಮತ್ತು ಮಾಜಿ ಸಿಎಂ

ಸಂಪುಟ ವಿಸ್ತರಣೆ, ಕೆಪಿಸಿಸಿ ನೇಮಕಾತಿ ಬಗ್ಗೆ ಚರ್ಚೆ
ಇನ್ನು ಸಚಿವ ಸಂಪುಟ ವಿಸ್ತರಣೆಯಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬ ಕುತೂಹಲ ತೀವ್ರಗೊಂಡಿದೆ. ಲಭ್ಯವಿರುವ ಸಚಿವ ಸ್ಥಾನಗಳಿಗಿಂತ ಹೆಚ್ಚಿನ ಸಂಖ್ಯೆಯ ಶಾಸಕರು ಮಂತ್ರಿಗಿರಿಗಾಗಿ ಲಾಬಿ ನಡೆಸುತ್ತಿದ್ದು, ಈ ಬಾರಿಯ ಸಂಪುಟ ವಿಸ್ತರಣೆ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಆದರೆ, ಸಭೆಯಲ್ಲಿ ನಡೆದ ಚರ್ಚೆಗಳ ಕುರಿತು ಅಧಿಕೃತ ಮಾಹಿತಿ ಇನ್ನೂ ಹೊರಬಿದ್ದಿಲ್ಲ.
ಇದರ ಜೊತೆಗೆ ಪಕ್ಷ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಕೆಪಿಸಿಸಿ ಪದಾಧಿಕಾರಿಗಳ ನೇಮಕ, ಪ್ರಚಾರ ಸಮಿತಿ ಅಧ್ಯಕ್ಷರ ಆಯ್ಕೆ, ಕೆಪಿಸಿಸಿ ಮಹಿಳಾ ಕಾರ್ಯಾಧ್ಯಕ್ಷೆ ಹಾಗೂ ನೂತನ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ನೇಮಕ ಕುರಿತಂತೆಯೂ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ. ಸಭೆಯ ಬಳಿಕ ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದರತ್ತ ರಾಜ್ಯ ರಾಜಕೀಯದ ಚಿತ್ತ ನೆಟ್ಟಿದೆ.
MUST WATCH: BIDADI ವಿಚಾರಕ್ಕೆ HDK – DK TALK WAR – MISTER D.K.SHIVAKUMAR ಎಂದ ಕುಮಾರಣ್ಣ




