ಸಿವಿಲ್ Constable ಹುದ್ದೆ ನೇಮಕಾತಿ; ಯಾವ ಜಿಲ್ಲೆಯಲ್ಲಿ ಎಷ್ಟು ಅರ್ಜಿ ಸಲ್ಲಿಕೆಯಾಗಿದೆ ಗೊತ್ತಾ?

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 3,395 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜೂನ್ 08, 2026 ರಿಂದ ಅಧಿಕೃತವಾಗಿ ಪ್ರಾರಂಭವಾಗಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 03, 2026 ಕೊನೆಯ ದಿನಾಂಕವಾಗಿತ್ತು.
ಒಟ್ಟು ಎಷ್ಟು ಅರ್ಜಿ ಸಲ್ಲಿಕೆಯಾಗಿದೆ?
ಇದೀಗ ಒಟ್ಟು 3,68,858 ಅರ್ಜಿ ಸಲ್ಲಿಕೆಯಾಗಿದೆ ಎಂದು ತಿಳಿದು ಬಂದಿದೆ. ಯಾವ ಜಿಲ್ಲೆಗೆ ಎಷ್ಟೆಷ್ಟು ಅರ್ಜಿ ಸಲ್ಲಿಕೆಯಾಗಿವೆ ಎಂಬ ಜಿಲ್ಲಾವಾರು ಮಾಹಿತಿ ಇಲ್ಲಿದೆ.

ಹುದ್ದೆಗಳ ಮೀಸಲಾತಿ
ಒಟ್ಟು 3,395 ಹುದ್ದೆಗಳ ಪೈಕಿ:
- ಪುರುಷ ಅಭ್ಯರ್ಥಿಗಳು – 2,266 ಹುದ್ದೆಗಳು
- ಮಹಿಳಾ ಅಭ್ಯರ್ಥಿಗಳು – 755 ಹುದ್ದೆಗಳು
- ಸೇವಾನಿರತ ಪುರುಷರು – 257 ಹುದ್ದೆಗಳು
- ಸೇವಾನಿರತ ಮಹಿಳೆಯರು – 82 ಹುದ್ದೆಗಳು
- ತೃತೀಯ ಲಿಂಗಿ ಅಭ್ಯರ್ಥಿಗಳು – 35 ಹುದ್ದೆಗಳು
ಈ ನೇಮಕಾತಿಯ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಲಿದ್ದು, ಪರೀಕ್ಷೆ ಆಫ್ಲೈನ್ OMR ಮಾದರಿಯಲ್ಲಿ ನಡೆಯಲಿದೆ.
ಇದನ್ನು ಓದಿ : ಸಿವಿಲ್ ಪೊಲೀಸ್ ಕಾನ್ಸ್ ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

1,600 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ಬಳಿಕ ಇದೀಗ 1,600 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (CAR/DAR) ಹುದ್ದೆಗಳ ಭರ್ತಿಗೂ ಅಧಿಸೂಚನೆ ಪ್ರಕಟಿಸಲಾಗಿದೆ.
ಹುದ್ದೆಗಳ ವಿವರ
- ಒಟ್ಟು ಹುದ್ದೆಗಳು: 1,600
- ಸಾಮಾನ್ಯ ಹುದ್ದೆಗಳು: 1,421
- ಕಲ್ಯಾಣ ಕರ್ನಾಟಕ ಮೀಸಲು ಹುದ್ದೆಗಳು: 179
ಈ ಹುದ್ದೆಗಳಿಗೆ ಮಹಿಳಾ, ಪುರುಷ ಹಾಗೂ ಸೇವಾನಿರತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಹತೆ ಮತ್ತು ವಯೋಮಿತಿ
ವಿದ್ಯಾರ್ಹತೆ:
- ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
- ಕನಿಷ್ಠ ವಯಸ್ಸು – 18 ವರ್ಷ
- ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ – 33 ವರ್ಷ
- ಎಸ್ಸಿ/ಎಸ್ಟಿ ಹಾಗೂ ಪ್ರವರ್ಗ 1, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 35 ವರ್ಷ
- ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಬುಡಕಟ್ಟು ಅಭ್ಯರ್ಥಿಗಳಿಗೆ – 38 ವರ್ಷ
ರಾಜ್ಯದಲ್ಲಿ ಪೊಲೀಸ್ ಉದ್ಯೋಗಕ್ಕಾಗಿ ಸಾವಿರಾರು ಅಭ್ಯರ್ಥಿಗಳು ಕಾಯುತ್ತಿರುವ ನಡುವೆಯೇ ಸಿವಿಲ್ ಹಾಗೂ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗೆ ಭಾರೀ ಸ್ಪಂದನೆ ವ್ಯಕ್ತವಾಗಿದ್ದು, ಮುಂದಿನ ಹಂತದ ಪರೀಕ್ಷೆಗೆ ಅಭ್ಯರ್ಥಿಗಳು ಸಿದ್ಧತೆ ಆರಂಭಿಸಿದ್ದಾರೆ.

ಇದನ್ನು ನೋಡಿ : ಯುವತಿಯನ್ನು ಅಟ್ಟಾಡಿಸಿ ಕೊಚ್ಚಿ ಕೊಂ* ಪಾಗಲ್ ಪ್ರೇಮಿ – ಬೆಚ್ಚಿಬಿದ್ದ ಜನರು




