RAIN ALERT : ರಾಜ್ಯದಲ್ಲಿ ಮುಂದುವರಿಯಲಿದೆ ಹಿಂಗಾರು ಮಳೆಯ ಪ್ರಭಾವ! ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ರಾಜ್ಯದಲ್ಲಿ ಹಿಂಗಾರು ಮಳೆಯ ಪ್ರಭಾವ ಇನ್ನೂ ಮುಂದುವರಿಯುವ ಸಾಧ್ಯತೆ ಇದೆ. ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದು. ಅದರಲ್ಲೂ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.
ಹವಾಮಾನದಲ್ಲಿ ಏರುಪೇರು
ಇನ್ನು ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಕೂಡ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಕೆಲವು ದಿನಗಳಿಂದ ಬಿಸಿಲು, ಮೋಡ ಹಾಗೂ ಮಳೆಯ ನಡುವೆ ಹವಾಮಾನದಲ್ಲಿ ಏರುಪೇರಾಗುತ್ತಿದ್ದು, ಇದೀಗ ಮತ್ತೆ ಮಳೆಯ ಮುನ್ಸೂಚನೆಯಿದೆ.
READ THIS : ರಾಜ್ಯದ ಹಲವೆಡೆ ವರುಣನ ಅಬ್ಬರ – ಈ ಜಿಲ್ಲೆಗಳಿಗೆ ಎಚ್ಚರಿಕೆ!

ಈ ಜಿಲ್ಲೆಗಳಲ್ಲಿ ಒಣಹವೆ
ಮತ್ತೊಂದೆಡೆ, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಕೆಲ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬಂದರೂ, ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಉಂಟಾಗುವ ಸಾಧ್ಯತೆ ಕಡಿಮೆ ಎಂದು ಅಂದಾಜಿಸಲಾಗಿದೆ.

RAIN ALERT – ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ
ಇನ್ನು ರಾಜಧಾನಿ ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ ಇರಲಿದೆ. ನಗರದ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

MUST WATCH : ಬರದ ನಾಡಿನಲ್ಲಿ ಜಲಸಂಭ್ರಮ ಜಗಳೂರಿನಲ್ಲಿ ನನಸಾದ ದಶಕಗಳ ಕನಸು




