ನಟಿ Trisha ಅವರನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ನಡುವೆಯೇ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ನಟಿ ತ್ರಿಷಾ (Trisha) ಅವರನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ನಡುವೆಯೇ ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.
ಕಾವೇರಿ ಜಲ ವಿವಾದದ ಕುರಿತು ನೀಡಿದ ಭಾಷಣದ ವೇಳೆ ಮಾಡಿದ ಹೇಳಿಕೆ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆಯೇ ಪೊಲೀಸರು ಅವರನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.
ತ್ರಿಷಾ ವಿರುದ್ಧ ವಿವಾದಾತ್ಮಕ ಹೇಳಿಕೆ
ಕಾವೇರಿ ನೀರಿನ ವಿಚಾರದಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಸರ್ಕಾರವನ್ನು ಟೀಕಿಸುವ ವೇಳೆ ಉದಯನಿಧಿ ಸ್ಟಾಲಿನ್ ನೀಡಿದ ಹೇಳಿಕೆಯನ್ನು ಹಲವರು ನಟಿ ತ್ರಿಷಾ ಅವರನ್ನು ಪರೋಕ್ಷವಾಗಿ ಉಲ್ಲೇಖಿಸಿ ಮಾಡಿದ ದ್ವಂದ್ವಾರ್ಥದ ಮಾತು ಎಂದು ಆರೋಪಿಸಿದ್ದಾರೆ.
ತಮಿಳಗ ವೆತ್ರಿ ಕಳಗಂ (ಟಿವಿಕೆ) ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದವು.

ನಾನು ಯಾವುದೇ ತಪ್ಪು ಮಾಡಿಲ್ಲ
ಬಂಧನದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಉದಯನಿಧಿ ಸ್ಟಾಲಿನ್, “ನಾನು ಯಾವುದೇ ತಪ್ಪು ಮಾಡಿಲ್ಲ. ನಾನು ಮುಖ್ಯಮಂತ್ರಿಯನ್ನು ಬಿಟ್ಟರೆ ಬೇರೆ ಯಾರ ಹೆಸರನ್ನೂ ಹೇಳಿಲ್ಲ.
ಇದು ರಾಜಕೀಯ ಪ್ರತೀಕಾರದ ಕ್ರಮ. ಈ ವಿಚಾರದ ಅಂತಿಮ ತೀರ್ಪನ್ನು ನ್ಯಾಯಾಲಯವೇ ನೀಡಲಿದೆ” ಎಂದು ಪ್ರತಿಕ್ರಿಯಿಸಿದರು.
ಇದನ್ನು ಓದಿ : ಡಿವೋರ್ಸ್ ವಿವಾದ ನಡುವೆ ಮ್ಯಾಚಿಂಗ್ ಡ್ರೆಸ್ನಲ್ಲಿ ಮಿಂಚಿದ Vijay – Trisha
ಏನಿದು ವಿವಾದ?
ತಂಜಾವೂರಿನಲ್ಲಿ ಕಾವೇರಿ ನೀರಿನ ಬಿಕ್ಕಟ್ಟಿನ ಕುರಿತು ನಡೆದ ಡಿಎಂಕೆ ಪ್ರತಿಭಟನಾ ಸಭೆಯಲ್ಲಿ ಮಾತನಾಡುತ್ತಿದ್ದ ಉದಯನಿಧಿ ಸ್ಟಾಲಿನ್, ಕಾವೇರಿ ನೀರಿನ ವಿಷಯದಲ್ಲಿ ಮುಖ್ಯಮಂತ್ರಿ ವಿಜಯ್ ಸರ್ಕಾರವನ್ನು ಟೀಕಿಸಿದರು. “ನಮ್ಮ ಮುಖ್ಯಮಂತ್ರಿ ಕಾವೇರಿ ನೀರಿನ ವಿಚಾರದಲ್ಲಿ ಬಾಯಿ ತೆರೆಯುತ್ತಿಲ್ಲ. ಅವರ ಏಕೈಕ ಚಿಂತೆ ಡಿಎಂಕೆ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುವುದಷ್ಟೇ” ಎಂದು ಆರೋಪಿಸಿದರು.

ಇದೇ ವೇಳೆ ಸಭೆಯಲ್ಲಿ ಭಾಗವಹಿಸಿದ್ದ ಕೆಲವರು “ತ್ರಿಷಾ… ತ್ರಿಷಾ…” ಎಂದು ಘೋಷಣೆ ಕೂಗಿದರು. ಇದಕ್ಕೆ ಪ್ರತಿಕ್ರಿಯಿಸಿದ ಉದಯನಿಧಿ ಸ್ಟಾಲಿನ್, ತಮಿಳಿನಲ್ಲಿ ದ್ವಂದ್ವಾರ್ಥ ಮೂಡುವ ರೀತಿಯಲ್ಲಿ “ಯಾವ ನೀರು ಬರುತ್ತದೋ ಇಲ್ಲವೋ, ಆ ನೀರು ಬರಲೇಬೇಕು” ಎಂದು ಹೇಳಿದರು.
ಈ ಮಾತು ನಟಿ ತ್ರಿಷಾ ಅವರನ್ನು ಪರೋಕ್ಷವಾಗಿ ಗುರಿಯಾಗಿಸಿ, ಮಹಿಳೆಯನ್ನು ಅವಮಾನಿಸುವ ಹಾಗೂ ಅಶ್ಲೀಲ ಅರ್ಥ ನೀಡುವ ರೀತಿಯಲ್ಲಿದೆ ಎಂದು ಟಿವಿಕೆ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಆರೋಪಿಸಿವೆ.
ಇದನ್ನು ನೋಡಿ : ರಸ್ತೆ ಗುಂಡಿಗಳಿಂದ ಜನ ಹೈರಾಣು – ಗುಂಡಿ ಬಿದ್ದ ರಸ್ತೆಯಲ್ಲಿ ಗಿಡ ನೆಟ್ಟು ಆಕ್ರೋಶ





