Lakshmidevi ಕುರಿತು ವಿವಾದತ್ಮಕ ಹೇಳಿಕೆ : ಬಿಗ್ ಬಾಸ್ ಮಾಜಿ ಸ್ಪರ್ಧಿ ಆರ್ಯವರ್ಧನ್ ಗುರೂಜಿ ವಿರುದ್ಧ ದೂರು ದಾಖಲು!

ಪ್ರಖ್ಯಾತ ಸಂಖ್ಯಾಶಾಸ್ತ್ರಜ್ಞ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಆರ್ಯವರ್ಧನ್ ಗುರೂಜಿ ವಿರುದ್ಧ ಬೆಂಗಳೂರಿನ ಶಂಕರಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಯೂಟ್ಯೂಬ್ ಸಂದರ್ಶನವೊಂದರಲ್ಲಿ ಅವರು ನೀಡಿದ್ದರೆನ್ನಲಾದ ವಿವಾದಾತ್ಮಕ ಸೋಶಿಯಲ್ ಮಿಡಿಯಾಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಲಕ್ಷೀದೇವಿ ಕುರಿತು ವಿವಾದತ್ಮಕ ಹೇಳಿಕೆ
ಇತ್ತೀಚೆಗೆ ಯೂಟ್ಯೂಬ್ ಚಾನೆಲ್ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಆರ್ಯವರ್ಧನ್ ಗುರೂಜಿ ಅವರು ಲಕ್ಷ್ಮೀ ದೇವಿಯ (Lakshmidevi) ಆರಾಧನೆ ಹಾಗೂ ಮಾನವ ದೇಹದ ಅಂಗವೊಂದನ್ನು ಹೋಲಿಸಿ ಮಾತನಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹೇಳಿಕೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಕೆಲವರು ಇದು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಹಾಗೂ ಮಹಿಳೆಯರಿಗೆ ಅವಮಾನವಾಗುವ ಹೇಳಿಕೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ : Ravi Shankar ಗುರೂಜಿ ವಿರುದ್ಧ ದೂರು

ಕಠಿಣ ಕಾನೂನು ಕ್ರಮಕ್ಕಾಗಿ ಒತ್ತಾಯ
ಈ ಹಿನ್ನೆಲೆಯಲ್ಲಿ ಕರ್ನಾಟಕ ಗೋವು ರಕ್ಷಕರ ಸೇನೆ ಸಂಘಟನೆಯ ಸುಮನ್ ಎಂಬುವವರು ಶಂಕರಪುರಂ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ, ಧಾರ್ಮಿಕ ಹಾಗೂ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವಂತಹ ಹೇಳಿಕೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಲಾಗಿದೆ.

Lakshmidevi ಕುರಿತು ಹೇಳಿಕೆ – ಠಾಣೆಗೆ ಹಾಜರಾಗುವಂತೆ ನೋಟೀಸ್!
ಪ್ರಸ್ತುತ ದೂರನ್ನು ಸ್ವೀಕರಿಸಿರುವ ಶಂಕರಪುರಂ ಠಾಣೆಯ ಪೊಲೀಸರು ಪ್ರಕರಣದ ಪ್ರಾಥಮಿಕ ತನಿಖೆಯನ್ನು ಆರಂಭಿಸಿದ್ದಾರೆ. ಘಟನೆಯ ಸತ್ಯಾಸತ್ಯತೆ ಹಾಗೂ ಹೇಳಿಕೆಯ ಹಿಂದಿರುವ ಹಿನ್ನೆಲೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಇನ್ನು ಈ ಪ್ರರಕಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆದು ವಿಚಾರಣೆ ನಡೆಸಲು ಆರ್ಯವರ್ಧನ್ ಗುರೂಜಿ ಅವರಿಗೆ ಠಾಣೆಗೆ ಹಾಜರಾಗುವಂತೆ ನೋಟಿಸ್ (ಬುಲಾವ್) ನೀಡಲಾಗಿದೆ ಎಂದು ತಿಳಿದುಬಂದಿದೆ.
ಇದನ್ನು ನೋಡಿ : ಭುವನಾ ಸಾ*ಗೆ ನ್ಯಾಯಕ್ಕಾಗಿ ಆಗ್ರಹ – ಡಿಸಿ ಕಚೇರಿ ಮುಂದೆ ಸಿಬ್ಬಂದಿ ಆಕ್ರೋಶ





