ವಿಧಾನ ಪರಿಷತ್ Election ಗೆ ಕೌಂಟ್ ಡೌನ್ – ಪರಿಷತ್ ಎಲೆಕ್ಷನ್ಗೆ ಅಡ್ಡಮತದಾನದ ಭೀತಿ

ರಾಜ್ಯ ವಿಧಾನ ಪರಿಷತ್ ಸದಸ್ಯರ ಅಧಿಕಾರವಧಿ ಮುಕ್ತಾಯಗೊಳ್ಳುತ್ತಿದ್ದು, ಜೂನ್ 18 ರಂದು ಪರಿಷತ್ ಚುನಾವಣೆ ನಡೆಯಲಿದೆ. ಪರಿಷತ್ ಚುನಾವಣೆಗೆ ಈಗಾಗಲೇ ಕಾಂಗ್ರೆಸ್ ಹಾಗೂ ಮೈತ್ರಿ ನಾಯಕರು ಸಕಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಇನ್ನೇರಡು ದಿನಗಳಲ್ಲಿ ಪರಿಷತ್ Election ಇದ್ದು, ಈ ಮಧ್ಯೆ ಕಾಂಗ್ರೆಸ್ನ 14 ಮಂದಿ ಶಾಸಕರಿಗೆ ಜೆಡಿಎಸ್ ಪಕ್ಷದವರು ಸಂಪರ್ಕಿಸಿದ್ದಾರೆ ಎಂಬ ಮಾಹಿತಿ ಇದ್ದು, ಅಡ್ಡಮತದಾನದ ಭೀತಿ ಎದುರಾಗಿದೆ.
ರಾಜ್ಯದಲ್ಲಿ ಮತ್ತೆ ರೆಸಾರ್ಟ್ ಪಾಲಿಟಿಕ್ಸ್..!
ಇನ್ನು ಪರಿಷತ್ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ರೆಸಾರ್ಟ್ ಪಾಲಿಟಿಕ್ಸ್ ಜೋರಾಗಿದೆ. ಕಾಂಗ್ರೆಸ್ನ ಸುಮಾರು 14 ಮಂದಿ ಶಾಸಕರಿಗೆ ಜೆಡಿಎಸ್ ಸಂಪರ್ಕ ಮಾಡಿದೆ ಎಂಬ ಮಾಹಿತಿ ಇದ್ದು, ಜೊತೆಗೆ ಪಕ್ಷೇತರ ಶಾಸಕರನ್ನು ಕೂಡ ಹೆಚ್ಡಿಕೆ ಸಂಪರ್ಕಿಸಿದ್ದಾರೆ ಎಂಂದು ಮೂಲಗಳು ತಿಳಿದು ಬಂದಿದೆ.
ಇದನ್ನು ಓದಿ : ವಿಧಾನ ಪರಿಷತ್ ಚುನಾವಣೆಗೆ ಮುಹೂರ್ತ ಫಿಕ್ಸ್

ಕೈ ಶಾಸಕರು ರೆಸಾರ್ಟ್ಗೆ ಶಿಫ್ಟ್ ಯಾಕೆ?
ಇದ್ರಿಂದ ಕಾಂಗ್ರೆಸ್ ನಾಯಕರಿಂದ ಅಡ್ಡಮತದಾನದ ಭೀತಿ ಇರೋದ್ರಿಂದ ನಾಳೆ ಕಾಂಗ್ರೆಸ್ನ ಎಲ್ಲ ಶಾಸಕರು ಬಿಡದಿಯ ವಂಡರ್ಲಾ ರೆಸಾರ್ಟ್ಗೆ ಶಿಫ್ಟ್ ಆಗಿಲಿದ್ದಾರೆ. ವಂಡರ್ ಲಾ ರೆಸಾರ್ಟ್ನಲ್ಲಿ ಸುಮಾರು 140 ರೂಂಗಳು ಬುಕ್ ಆಗಿದ್ದು, ನಾಳೆ ಎಲ್ಲ ಶಾಸಕರು ರೆಸಾರ್ಟ್ಗೆ ಶಿಫ್ಟ್ ಆಗಲಿದ್ದಾರೆ. ನಾಳೆ, ನಾಡಿದ್ದು ಎಲ್ಲಾ ಶಾಸಕರು ರೆಸಾರ್ಟ್ನಲ್ಲೇ ಇದ್ದು, ಜೂನ್ 18 ರಂದು ಶಾಸಕರು ರೆಸಾರ್ಟ್ನಿಂದ ನೇರವಾಗಿ ವಿಧಾನಸೌಧಕ್ಕೆ ಬರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನು ವಂಡರ್ ಲಾ ರೆಸಾರ್ಟ್ನಲ್ಲಿ ಸಕಲ ತಯಾರಿ ಮಾಡಿಕೊಳ್ಳಲಾಗಿದ್ದು, ಮಾಗಡಿ ಶಾಸಕ ಬಾಲಕೃಷ್ಣ ರೆಸಾರ್ಟ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
ಯಾವಾಗ ಪರಿಷತ್ Election ?
ಇನ್ನು ವಂಡರ್ ಲಾ ರೆಸಾರ್ಟ್ನಲ್ಲಿ ಡಿ.ಕೆ ಶಿವಕುಮಾರ್ ನೇತೃತ್ವದ ಮೊದಲ ಶಾಸಕಾಂಗ ಸಭೆ ನಡೆಯಲಿದ್ದು, ಸಭೆಯಲ್ಲಿ ಮತದಾನ ಪ್ರಕ್ರಿಯೆ ಬಗ್ಗೆ ತರಬೇತಿ ನೀಡಲಾಗುತ್ತೆ.
ಅಡ್ಡ ಮತದಾನ, ಮತಗಳ ಅಸಿಂಧು, ಯಾರಿಗೆ ಮತ ಹಾಕಬೇಕೆಂಬ ಗೊಂದಲಗಳನ್ನು ತಪ್ಪಿಸಲು ಕಾಂಗ್ರೆಸ್ ಶಾಸಕರು ರೆಸಾರ್ಟ್ಗೆ ಶಿಫ್ಟ್ ಆಗಲಿದ್ದಾರೆ.
ಜೂನ್ 18ಕ್ಕೆ ಪರಿಷತ್ ಚುನಾವಣೆ ನಡೆಯಲಿದ್ದು, ಯಾವ ಪಕ್ಷ ಹೆಚ್ಚು ಸ್ಥಾನ ಪಡೆದುಕೊಳ್ಳುತ್ತದೆ ಅನ್ನೋದನ್ನ ಕಾದುನೋಡಬೇಕಿದೆ.

ಇದನ್ನು ನೋಡಿ : ಪೌತಿ ಖಾತೆಯಲ್ಲಿ ಮತ್ತೊಂದು ದಾಖಲೆಗೆ ತುಮಕೂರು ಸಜ್ಜು- ಅಧಿಕಾರಿಗಳಿಗೆ ಡಿಸಿ ಖಡಕ್ ವಾರ್ನಿಂಗ್




