Job Alert : ರೈಲ್ವೆಯಲ್ಲಿ 734 ಅಪ್ರೆಂಟಿಸ್ ಹುದ್ದೆಗಳ ಬಂಪರ್ ನೇಮಕಾತಿ; ಯಾವುದೇ ಲಿಖಿತ ಪರೀಕ್ಷೆಯಿಲ್ಲ!

ಭಾರತೀಯ ರೈಲ್ವೆಯ ರೈಲು ಕೋಚ್ ಫ್ಯಾಕ್ಟರಿ (RCF) ಭರ್ಜರಿ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪಂಜಾಬ್ನ ಕಪುರ್ತಲಾದ ತಾಂತ್ರಿಕ ತರಬೇತಿ ಕೇಂದ್ರದಲ್ಲಿ 734 ಆಕ್ಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಎಲೆಕ್ಟ್ರಿಷಿಯನ್ ಸೇರಿದಂತೆ ವಿವಿಧ ಟ್ರೇಡ್ಗಳಲ್ಲಿ ಅಪ್ರೆಂಟಿಸ್ಶಿಪ್ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಶೈಕ್ಷಣಿಕ ಅರ್ಹತೆ ಏನು?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ ಶೇ.50 ಅಂಕಗಳೊಂದಿಗೆ 10ನೇ ತರಗತಿ (SSLC) ಉತ್ತೀರ್ಣರಾಗಿರಬೇಕು. ಇದರ ಜೊತೆಗೆ ಸಂಬಂಧಿತ ಟ್ರೇಡ್ನಲ್ಲಿ ITI ಪ್ರಮಾಣಪತ್ರ ಹೊಂದಿರುವುದು ಕಡ್ಡಾಯವಾಗಿದೆ.

ವಯೋಮಿತಿ ಎಷ್ಟು?
ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 5, 2026ರ ವೇಳೆಗೆ ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ಇರಬೇಕು.
ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಅನ್ವಯವಾಗಲಿದೆ.
- SC/ST: 5 ವರ್ಷ
- OBC: 3 ವರ್ಷ
- PwBD: 10 ವರ್ಷ
ಇದನ್ನು ಓದಿ : ರೈಲ್ವೆ ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ – RRB ಯಲ್ಲಿ 119 ಹುದ್ದೆಗಳ ಭರ್ತಿ
ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ ವರ್ಗದ ಅಭ್ಯರ್ಥಿಗಳು ₹100 ಅರ್ಜಿ ಶುಲ್ಕ ಪಾವತಿಸಬೇಕು.
ಆದರೆ SC, ST, PwBD ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಪರೀಕ್ಷೆ ಇಲ್ಲ, ಸಂದರ್ಶನವೂ ಇಲ್ಲ!
ಈ ಅಪ್ರೆಂಟಿಸ್ಶಿಪ್ ನೇಮಕಾತಿಯ ಪ್ರಮುಖ ವಿಶೇಷತೆ ಎಂದರೆ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನ ಇರುವುದಿಲ್ಲ. 10ನೇ ತರಗತಿ ಹಾಗೂ ITI ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನ
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 5, 2026ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ, ಟ್ರೇಡ್ವಾರು ಖಾಲಿ ಹುದ್ದೆಗಳು, ಅರ್ಹತಾ ಮಾನದಂಡಗಳು, ವಯೋಮಿತಿ ಹಾಗೂ ಇತರ ನಿಯಮ-ಷರತ್ತುಗಳನ್ನು ಸಂಪೂರ್ಣವಾಗಿ ತಿಳಿದುಕೊಳ್ಳುವುದು ಸೂಕ್ತ.

ಇದನ್ನು ನೋಡಿ : ಅನರ್ಹರಿಗೆ ಪಿಂಚಣಿ ಮಂಜೂರು ಆರೋಪ ಕೇಳಿದ್ದಕ್ಕೆ ಅವಮಾನ ಮಾಡಿದ್ರಾ ಗುಬ್ಬಿ ತಹಶೀಲ್ದಾರ್




