
ಬರದ ಮಧ್ಯ ಕರ್ನಾಟಕಕ್ಕೆ ಮತ್ತೆ ಶಾಕ್ – ತಮಿಳುನಾಡಿಗೆ ದಿನಕ್ಕೆ 4000 ಕ್ಯೂಸೆಕ್ ನೀರು ಹರಿಸಲು CWRC ಆದೇಶ!
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ಕುರಿತು ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ, ಮುಂದಿನ 15 ದಿನಗಳ ಕಾಲ ಪ್ರತಿದಿನ 4,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ.
ಬರದ ಮಧ್ಯ ಕರ್ನಾಟಕಕ್ಕೆ ಮತ್ತೆ ಶಾಕ್!
ವಿನೀತ್ ಗುಪ್ತಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕದ ಪ್ರತಿನಿಧಿಗಳು ರಾಜ್ಯದಲ್ಲಿ ಮಳೆಯ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ, ಜಲಾಶಯಗಳಲ್ಲಿನ ನೀರಿನ ಮಟ್ಟ ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಸಮಿತಿಯ ಗಮನಕ್ಕೆ ತಂದರು. ರಾಜ್ಯದ ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಪ್ರಮಾಣವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿದರು.
READ THIS : ‘ಕಾವೇರಿ’ ಶಾಕ್ – ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್ ನೀರು ಹರಿಸಲು ಸೂಚನೆ

4000 ಕ್ಯೂಸೆಕ್ ನೀರು ಹರಿಸಲು CWRC ಆದೇಶ
ಆದರೆ, ತಮಿಳುನಾಡಿನ ಕುರುವೈ ಬೆಳೆ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಕಾವೇರಿ ನೀರಿನ ಅಗತ್ಯವಿದೆ ಎಂಬ ವಾದವನ್ನು ಪರಿಗಣಿಸಿದ CWRC, ಮುಂದಿನ 15 ದಿನಗಳವರೆಗೆ ಪ್ರತಿದಿನ 4,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ.
ಈ ಆದೇಶದಿಂದ ರಾಜ್ಯದಲ್ಲಿ ಕಾವೇರಿ ನೀರು ಹಂಚಿಕೆ ಕುರಿತು ಮತ್ತೆ ಚರ್ಚೆ ತೀವ್ರಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಮಳೆ ಕೊರತೆ ಮತ್ತು ಜಲಾಶಯಗಳಲ್ಲಿನ ನೀರಿನ ಲಭ್ಯತೆ ಬಗ್ಗೆ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, CWRC ಆದೇಶ ಕರ್ನಾಟಕ ಸರ್ಕಾರಕ್ಕೆ ಹೊಸ ಸವಾಲಾಗಿ ಪರಿಣಮಿಸಿದೆ.

MUST WATCH : ಸರ್ಕಾರದಿಂದ 1 ರೂಪಾಯಿ ಬಿಡುಗಡೆ ಆಗಿಲ್ಲಾ – ಸದನದಲ್ಲಿ ಸರ್ಕಾರಕ್ಕೆ ಚಾಟಿ ಬೀಸಿದ ಸುರೇಶ್ ಗೌಡ




