ಚಂಡಮಾರುತ ಎಫೆಕ್ಟ್ : ಮುಂದಿನ 4 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ!

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಮುಂದಿನ 3ರಿಂದ 4 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮಳೆ?
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣ ಹಾಗೂ ಮಧ್ಯಂತರ ಮಳೆಯು ಮುಂದುವರಿದಿದ್ದು, ಇದೇ ಪರಿಸ್ಥಿತಿ ಇನ್ನೂ ಕೆಲ ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ.

ರಾಜ್ಯದಾದ್ಯಂತ ವ್ಯಾಪಕ ಮಳೆ
ಹವಾಮಾನ ಇಲಾಖೆಯ ಪ್ರಕಾರ, ಸಮುದ್ರ ಮಟ್ಟದಲ್ಲಿ ಮಾನ್ಸೂನ್ ತಗ್ಗು ಪ್ರದೇಶವು ಶ್ರೀ ಗಂಗಾನಗರ, ರೋಹ್ಟಕ್, ಶಹಜಹಾನ್ಪುರ, ಸುಲ್ತಾನ್ಪುರ, ಗಯಾ ಹಾಗೂ ಬಂಕುರಾ ಮಾರ್ಗವಾಗಿ ಮಿಜೋರಾಂ ಕಡೆಗೆ ವಿಸ್ತರಿಸಿದೆ.
ಜೊತೆಗೆ ದಕ್ಷಿಣ ತಮಿಳುನಾಡು–ಪುದುಚೇರಿ ಹಾಗೂ ಕರ್ನಾಟಕದ ದಕ್ಷಿಣ ಒಳನಾಡಿನ ವಾಯುಮಂಡಲದಲ್ಲಿ 5.8 ರಿಂದ 7.6 ಕಿಲೋಮೀಟರ್ ಎತ್ತರದಲ್ಲಿ ಮೇಲ್ಮೈ ವಾಯು ಚಂಡಮಾರುತದ ಪರಿಚಲನೆ ಮುಂದುವರಿದಿದೆ.
ಈ ವಾತಾವರಣದ ಬೆಳವಣಿಗೆಗಳಿಂದ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದೆ.
ಇದನ್ನು ಓದಿ : ಎಲ್ ನಿನೋ ಎಚ್ಚರಿಕೆ ನಡುವೆಯೇ ಹವಾಮಾನದಲ್ಲಿ ಭಾರೀ ಬದಲಾವಣೆ!
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದ್ದು, ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಮಲೆನಾಡಿನಲ್ಲ ಭಾರಿ ಮಳೆ
ಅದೇ ರೀತಿ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲೂ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ.
ನದಿಗಳ ನೀರಿನ ಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ನದಿ, ಹಳ್ಳ-ಕೊಳ್ಳಗಳ ಸಮೀಪ ತೆರಳದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲೂ ಭಾರೀ ಮಳೆಯೊಂದಿಗೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನು ನೋಡಿ : CHEMICAL FACTORYಯಲ್ಲಿ ಘೋರ ದುರಂತ..! – CHEMICAL LEAK ಆಗಿ ಮೂವರು ಸಾ*




