CHIKKANAYAKANAHALLI : ಶಾಲೆಯ ದಾಸೋಹ ಕೊಠಡಿಯಲ್ಲಿ ಸಿಲಿಂಡರ್ ಸ್ಫೋಟ ಕೇಸ್ – ಚಿಕಿತ್ಸೆ ಫಲಕಾರಿಯಾಗದೆ ಇಂದು ಅಡುಗೆ ಸಹಾಯಕಿ ಸಾವು

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಗ್ರಾಮದ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ, ಅಡುಗೆ ಸಹಾಯಕಿ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ.
READ THIS : ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಸಿಲಿಂಡರ್ ಸ್ಪೋಟ – ಉಪಕರಣಗಳು ಸುಟ್ಟು ಭಸ್ಮ!
ಚಿಕಿತ್ಸೆ ಫಲಕಾರಿಯಾಗದೆ ಅಡುಗೆ ಸಹಾಯಕಿ ಸಾವು
ಮೃತ ದುರ್ದೈವಿಯನ್ನು 30 ವರ್ಷದ ಲತಾಮಣಿ ಎಂದು ಗುರುತಿಸಲಾಗಿದೆ. ಇದೇ ತಿಂಗಳ 24ರಂದು ಶಾಲಾ ಮಕ್ಕಳಿಗೆ ಅಡುಗೆ ತಯಾರಿಸುತ್ತಿದ್ದ ವೇಳೆ ದಾಸೋಹ ಕೊಠಡಿಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡಿತ್ತು. ಸ್ಫೋಟದ ತೀವ್ರತೆಗೆ ಲತಾಮಣಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಚಿಕ್ಕನಾಯಕನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು.

CHIKKANAYAKANAHALLI ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲೇ ಲತಾಮಣಿ ಕೊನೆಯುಸಿರೆಳೆದಿದ್ದಾರೆ. ಘಟನೆ ಸಂಬಂಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
MUST WATCH : ಗಣಪತಿ ದರ್ಶನ ಪಡೆದ ವಿಜಯೇಂದ್ರ ಮೋದಿ–ಶಾ ಆಡಳಿತಕ್ಕಾಗಿ ವಿಶೇಷ ಪೂಜೆ


